ಬೆಂಗಳೂರು: ನೆಲ, ಜಲ ಮತ್ತು ಭಾಷೆಯ ವಿಚಾರದಲ್ಲಿ ರಾಜ್ಯವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮುಂದಿನ ವಾರ ಎಲ್ಲ ಕನ್ನಡಪರ ಸಂಘಟನೆಗಳ ಮುಖಂಡರ ಜತೆ ಮಹತ್ವದ ಸಭೆ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ( Ex CM HD Kumaraswamy ) ಅವರು ತಿಳಿಸಿದರು.
ಬಿಡದಿಯ ತಮ್ಮ ತೋಟದಲ್ಲಿ ತಮ್ಮನ್ನು ಭೇಟಿಯಾದ ಕನ್ನಡ ಸಂಘಟನೆಗಳ ಮುಖಂಡರ ಜತೆ ಮಾತುಕತೆ ನಡೆಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಮುಖ್ಯಮಂತ್ರಿಗಳು; ‘ರಾಜ್ಯವು ಅನೇಕ ಜ್ವಲಂತ ಸಮಸ್ಯೆಗಳನ್ನು ಎದುರಿಸುತ್ತಿದೆ. ನೆಲ, ಜಲ ಹಾಗೂ ಭಾಷೆ ವಿಚಾರದಲ್ಲಿ ನಾವು ಅನೇಕ ಕಠಿಣ ಸವಾಲುಗಳನ್ನು ಎದುರಿಸುತ್ತಿದ್ದೇವೆ. ಇವುಗಳನ್ನು ಪರಿಣಾಮಕಾರಿಯಾಗಿ ಎದುರಿಸಬೇಕಾದರೆ ಎಲ್ಲ ಸಂಘಷಟನೆಗಳು ಒಟ್ಟಾಗಿ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ಚರ್ಚೆ ಮಾಡಲು ಸಭೆ ಕರೆದಿದ್ದೇನೆ’ ಎಂದರು.
Laxmi News 24×7