Breaking News

ಬೆಳಗಾವಿ ಎಪಿಎಂಸಿ ‌ಕಾರ್ಯದರ್ಶಿಗೆ ಮುತ್ತಿಗೆ: ಮಳಿಗೆ ವಾಪಸ್ ಪಡೆದು ಹಣ ಮರಳಿಸುವಂತೆ ವ್ಯಾಪಾರಿಗಳ ಒತ್ತಾಯ

Spread the love

ಬೆಳಗಾವಿ: ಎಪಿಎಂಸಿ ಇದ್ದರೂ ಜೈ ಕಿಸಾನ್ ಹೋಲ್​ಸೆಲ್​ ತರಕಾರಿ ಮಾರುಕಟ್ಟೆ ಸ್ಥಾಪನೆಗೆ ಲೈಸೆನ್ಸ್ ನೀಡಿದ್ದಕ್ಕೆ ಇಲ್ಲಿನ‌ ಎಪಿಎಂಸಿ ‌ಕಾರ್ಯದರ್ಶಿಗೆ ವ್ಯಾಪಾರಸ್ಥರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಎಪಿಎಂಸಿ ಹೋಲ್​ ಸೇಲ್​​ ತರಕಾರಿ ಮಾರುಕಟ್ಟೆಗೆ ಸೆಡ್ಡು ಹೊಡೆದು ಖಾಸಗಿ ತರಕಾರಿ ಮಾರುಕಟ್ಟೆ ಕಾರ್ಯಾರಂಭ‌ ಮಾಡಿದೆ. ಇದರಿಂದ ಇಲ್ಲಿನ‌ ಎಪಿಎಂಸಿ ‌ಮೇಲೆ ಆಗುತ್ತಿರುವ ಪರಿಣಾಮಗಳ ಬಗ್ಗೆ ‌ಚರ್ಚಿಸಲು ಬೆಳಗಾವಿ ಎಪಿಎಂಸಿ ಅಧ್ಯಕ್ಷ ಯುವರಾಜ್ ಕದಂ ನೇತೃತ್ವದಲ್ಲಿ ‌ಸಭೆ ನಡೆಸಲಾಯಿತು. ಸಭೆಯಲ್ಲಿ ಕಾರ್ಯದರ್ಶಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ವ್ಯಾಪಾರಿಗಳು ಸಭೆಯಲ್ಲಿ ಗದ್ದಲ, ಗಲಾಟೆ ನಡೆಸಿದರು.

ಎಪಿಎಂಸಿ ಕಾರ್ಯದರ್ಶಿ ಡಾ.ಕೆ.ಕೊಡಿಗೌಡಗೆ ಮುತ್ತಿಗೆ ಹಾಕಿ ತೀವ್ರ ತರಾಟೆ ತೆಗೆದುಕೊಂಡರು. ಹಣ ಪಡೆದು ಖಾಸಗಿ ಮಾರುಕಟ್ಟೆಗೆ ಲೈಸೆನ್ಸ್ ನೀಡಲಾಗಿದೆ ‌ಎಂದು ಆರೋಪಿಸಿದರು. ಲಕ್ಷಾಂತರ ರೂಪಾಯಿ ಹಣ ನೀಡಿ ಎಪಿಎಂಸಿಯಲ್ಲಿ ಮಳಿಗೆ ಖರೀದಿಸಿದ್ದೇವೆ. ಮಳಿಗೆಗಳನ್ನು ವಾಪಸ್ ಪಡೆದು ಹಣ ಹಿಂದಿರುಗಿಸಬೇಕು. ಜೈ ಕಿಸಾನ್ ತರಕಾರಿ ಮಾರುಕಟ್ಟೆ ಸ್ಥಾಪನೆ ಬಳಿಕ ಒಮ್ಮೆಯೂ ಎಪಿಎಂಸಿ ತರಕಾರಿ ಮಾರ್ಕೆಟ್‌ಗೆ ಭೇಟಿ ನೀಡಿಲ್ಲ ಎಂದು ಕಾರ್ಯದರ್ಶಿ ಡಾ.ಕೆ‌.ಕೊಡಿಗೌಡ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ