ಫೆಬ್ರವರಿ 14 ರಂದು (February) ಎಂಎಲ್ಸಿ (MLC) ಸ್ಥಾನಕ್ಕೆ ರಾಜೀನಾಮೆ ನೀಡಿ, ಅದೇ ದಿನ ಮುಂದಿನ ರಾಜಕೀಯ ನಿರ್ಧಾರವನ್ನು ನಾನು ಪ್ರಕಟಿಸುತ್ತೇನೆ, ಆದರೆ ಯಾವುದೇ ಕಾರಣಕ್ಕೂ ಹೊಸ ಪಕ್ಷ ಕಟ್ಟುವುದಿಲ್ಲ. ಮೊದಲು ಜನರ ಅಭಿಪ್ರಾಯವನ್ನು ಕೇಳಿಕೊಂಡು ನಂತರ ಯಾವ ಪಕ್ಷಕ್ಕೆ ಹೋಗಬೇಕು ಎಂದು ನಿರ್ಧರಿಸುತ್ತೇನೆ ಎಂದು ಮಾಜಿ ಕಾಂಗ್ರೆಸ್ ಮುಖಂಡ, ಎಂಎಲ್ಸಿ ಸಿ.ಎಂ.ಇಬ್ರಾಹಿಂ (C.M Ibrahim) ಹೇಳಿದ್ದಾರೆ.
ಮೈಸೂರಿನಲ್ಲಿ (Mysuru) ಸುದ್ದಿಗಾರರ ಜೊತೆ ಮಾತನಾಡಿದ ಇಬ್ರಾಹಿಂ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ನ (Congress) ಅಧ್ಯಾಯ ಮುಗಿದು ಹೋಗಿದೆ. ಯಾರಿಗೆ ಏನು ಬೇಕೋ ಅದನ್ನು ತಗೊಂಡು ಹೋಗ್ತಿದ್ದಾರೆ. ಮಂಚ, ಬೆಡ್, ದಿಂಬು ಹೀಗೆ ಅವಶ್ಯಕತೆಗೆ ತಕ್ಕಂತೆ ತೆಗೆದುಕೊಂಡು ಹೋಗುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರೋದು ನಿಜಕ್ಕೂ ಕನಸಿನ ಮಾತು ಎಂದು ತಮ್ಮ ಹಳೆಯ ಪಕ್ಷದ ಬಗ್ಗೆ ವ್ಯಂಗ್ಯವಾಡಿದ್ದಾರೆ