Breaking News
Home / ರಾಜಕೀಯ / ಕ್ಯಾನ್ಸರ್ ತಡೆಗೆ ನೀಡುವ ಹೆಚ್‌ಪಿವಿ ಲಸಿಕೆ ಅಭಿಯಾನ ಕೋವಿಡ್‌ನಿಂದಾಗಿ ಸ್ಥಗಿತ..!

ಕ್ಯಾನ್ಸರ್ ತಡೆಗೆ ನೀಡುವ ಹೆಚ್‌ಪಿವಿ ಲಸಿಕೆ ಅಭಿಯಾನ ಕೋವಿಡ್‌ನಿಂದಾಗಿ ಸ್ಥಗಿತ..!

Spread the love

ಹೈದರಾಬಾದ್‌: ಜಗತ್ತಿನಲ್ಲಿ ಹೆಚ್ಚಿನ ಸಾವುಗಳ ಪ್ರಮುಖ ಕಾರಣಗಳಲ್ಲಿ ಕ್ಯಾನ್ಸರ್‌ ಕೂಡ ಒಂದು. ಇಂದು ವಿಶ್ವ ಕ್ಯಾನ್ಸರ್‌ ಜಾಗೃತಿ ದಿನವಾಗಿದ್ದು, ಈ ರೋಗದ ಬಗ್ಗೆ ಜಾಗೃತಿ ಮೂಡಿಸಲು ವಿಶ್ವಾದ್ಯಂತ ಕ್ಯಾನ್ಸರ್‌ ದಿನವನ್ನಾಗಿ ಆಚರಿಸಲಾಗುತ್ತದೆ. ಭಾರತದಲ್ಲಿ ಸ್ತನ ಕ್ಯಾನ್ಸರ್‌, ಗರ್ಭ ಕ್ಯಾನ್ಸರ್‌, ಶ್ವಾಸಕೋಶ, ತಲೆ ಹಾಗೂ ಕುತ್ತಿಗೆ ಕ್ಯಾನ್ಸರ್‌ ಪ್ರಕರಣಗಳು ಹೆಚ್ಚಿವೆ.

ಕ್ಯಾನ್ಸರ್ ಸಾಂಕ್ರಾಮಿಕ ರೋಗವನ್ನು ಎದುರಿಸಲು ಜಗತ್ತನ್ನು ಒಟ್ಟುಗೂಡಿಸುವ ಜಾಗತಿಕ ಉಪಕ್ರಮವೇ ವಿಶ್ವ ಕ್ಯಾನ್ಸರ್‌ ದಿನವಾಗಿದ್ದು, ಕ್ಯಾನ್ಸರ್‌ ರೋಗದ ಬಗ್ಗೆ ಜಾಗೃತಿ ಮೂಡಿಸುವ ಮಹತ್ವವನ್ನು ಇದು ಪುನರ್ ದೃಢೀಕರಿಸುತ್ತದೆ. ಕ್ಯಾನ್ಸರ್‌ ಅನ್ನು ಸಂಪೂರ್ಣವಾಗಿ ಗುಣಪಡಿಸುವ ಔಷಧವನ್ನು ಇದುವರೆಗೆ ಅಭಿವೃದ್ಧಿಪಡಿಸಲು ಸಾಧ್ಯವಾಗಿಲ್ಲ. ಈ ರೋಗವನ್ನು ನಿಯಂತ್ರಿಸುವಲ್ಲಿ ನಮ್ಮ ಪಾತ್ರವೇನು ಎಂಬ ಪ್ರಮುಖ ಸಂದೇಶವನ್ನು ರವಾನಿಸುವುದು ಈ ದಿನದ ಮಹತ್ವವಾಗಿದೆ.

ಕ್ಯಾನ್ಸರ್ ಬಗ್ಗೆ ತಪ್ಪು ಕಲ್ಪನೆಗಳು, ಕಟ್ಟುಕತೆಗಳನ್ನು ಹೋಗಲಾಡಿಸಿ ಜನರಿಗೆ ಇದರ ಬಗ್ಗೆ ಶಿಕ್ಷಣ ನೀಡುವುದರ ಜತೆಗೆ ಸರಿಯಾದ ಚಿಕಿತ್ಸೆಯನ್ನು ಪಡೆಯಲು ಮತ್ತು ಸಾವಿನ ಸಂಖ್ಯೆಯನ್ನು ಕಡಿಮೆ ಮಾಡುವುದು ಅಂತಾರಾಷ್ಟ್ರೀಯ ಕ್ಯಾನ್ಸರ್‌ ದಿನದ ಪ್ರಮುಖ ಉದ್ದೇಶವಾಗಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ