Breaking News

ವಿದ್ಯಾರ್ಥಿನಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ: ಇಬ್ಬರು ಮಹಿಳೆಯರು ಸೇರಿ ಮೂವರ ಬಂಧನ

Spread the love

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಓರ್ವ ಪುರುಷ, ಇಬ್ಬರು ಮಹಿಳೆಯರನ್ನು ಮಂಗಳೂರು ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಪಿಯುಸಿ ಓದುತ್ತಿದ್ದ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು ನಾಲ್ವರನ್ನು ರಕ್ಷಿಸಲಾಗಿದೆ.

ಇವರು ಮಂಗಳೂರಿನ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿನಿಯರು. ಮಂಗಳೂರಿನ ಪೆಂಟ್ ಹೌಸ್ ಒಂದರಲ್ಲಿ ಈ ಹೈಟೆಕ್ ವೇಶ್ಯಾವಾಟಿಕೆ ನಡೆಯುತ್ತಿತ್ತು.

ಬಂಧಿತರನ್ನು ಶಮೀನಾ, ಆಯಿಷಮ್ಮ ಮತ್ತು ಸಿದ್ಧಿಕ್​ ಎಂದು ಗುರುತಿಸಲಾಗಿದೆ. ಸಿಸಿಟಿವಿ ಕ್ಯಾಮೆರಾ ಅಳವಡಿಸಿ ವಿಡಿಯೋ ರೆಕಾರ್ಡ್​ ಮಾಡಿ ಯುವತಿಯರು ಮತ್ತು ಬಾಲಕಿಯರನ್ನು ಬೆದರಿಸಲಾಗುತ್ತಿತ್ತು.

ಅಪ್ರಾಪ್ತ ಬಾಲಕಿಯೊಬ್ಬಳು ನೀಡಿದ ದೂರಿನ‌ ಮೇರೆಗೆ ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಮತ್ತು ಐ.ಟಿ.ಪಿ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ, ಮಂಗಳೂರು ನಗರ ಪೊಲೀಸ್ ಕಮಿಷನರ್​ ಎನ್. ಶಶಿಕುಮಾರ್ ಅವರು ಕಾನೂನು ಸುವ್ಯವಸ್ಥೆ ವಿಭಾಗದ ಡಿ.ಸಿ.ಪಿ ಹರಿರಾಂ ಶಂಕರ್ ಮೇಲುಸ್ತುವಾರಿಯಲ್ಲಿ ತನಿಖೆಗೆ ಸೂಚನೆ ನೀಡಿದ್ದಾರೆ. 


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ