Breaking News

ರಮೇಶ್‌ ಜಾರಕಿಹೊಳಿ ಅವರಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಕ್ಲೀನ್‌ ಚಿಟ್‌ ಕೊಟ್ಟಿದೆ.

Spread the love

ಬೆಂಗಳೂರು: ಅತ್ಯಾಚಾರದ ಆರೋಪ ಹೊತ್ತಿದ್ದ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಕ್ಲೀನ್‌ ಚಿಟ್‌ ಕೊಟ್ಟಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ 1ನೇ ಎಸಿಎಂಎಂ ಕೋರ್ಟ್‌ಗೆ ಬಿ ರಿಪೋರ್ಟ್‌ ಪ್ರತಿ ಸಲ್ಲಿಸಿದೆ.

150 ಪುಟಗಳ ಬಿ ರಿಪೋರ್ಟ್‌ ಅನ್ನು 1ನೇ ಎಸಿಎಂಎಂ ಕೋರ್ಟ್‌ಗೆ ಸಲ್ಲಿಕೆ ಮಾಡಲಾಗಿದೆ. ಇದರಿಂದ ರಮೇಶ್ ಜಾರಕಿಹೊಳಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಅತ್ಯಾಚಾರ ಪ್ರಕರಣದಲ್ಲಿ ರಮೇಶ್‌ ಜಾರಕಿಹೊಳಿಗೆ ಎಸ್‌ಐಟಿ ಕ್ಲೀನ್ ಚಿಟ್ ಕೊಟ್ಟಿದೆ. ಯುವತಿ ಕೊಟ್ಟ ದೂರಿನಲ್ಲಿ ಯಾವುದೇ ಹುರುಳಿಲ್ಲ. ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳು ಇಲ್ಲ ಎಂದು ತಿಳಿಸಲಾಗಿದೆ.

ಮೇಶ್‌ ಜಾರಕಿಹೊಳಿಗೆ ಸಂಬಂಧಿಸಿದ್ದು ಎನ್ನಲಾಗಿದ್ದ ಸಿಡಿ ಪ್ರಕರಣದ ತನಿಖಾ ವರದಿ ಸಲ್ಲಿಸುವಂತೆ ಎಸ್‌ಐಟಿಗೆ ಹೈಕೋರ್ಟ್‌ ಸೂಚನೆ ನೀಡಿತ್ತು. ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಿದೆ. ಬಿ ರಿಪೋರ್ಟ್‌ ಸಲ್ಲಿಕೆ ಹಿನ್ನೆಲೆಯಲ್ಲಿ ದೂರುದಾರ ಯುವತಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ನಿಮ್ಮ ಪ್ರಕರಣ ಮುಕ್ತಾಯ ಆಗಿದೆ. ತನಿಖೆ ಮುಕ್ತಾಯಗೊಂಡಿದೆ. 1ನೇ ಎಸಿಎಂಎಂ ಕೋರ್ಟ್‌ಗೆ ಸಲ್ಲಿಕೆ ಮಾಡಲಾಗಿದೆ ಎಂದು ನೋಟಿಸ್ ನೀಡಿದೆ.

ಸಾಕ್ಷ್ಯಾಧಾರ ಕೊರತೆಯಿಂದ ಪ್ರಕರಣ ಮುಕ್ತಾಯ ಮಾಡಿದ್ದೇವೆ ಎಂಬುದಾಗಿ ಇಂದು ಬೆಳಗ್ಗೆ ನೋಟಿಸ್ ನೀಡಿ ಬಳಿಕ ಬಿ ರಿಪೋರ್ಟ್ ಸಲ್ಲಿಸಲಾಗಿದೆ.


Spread the love

About Laxminews 24x7

Check Also

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Spread the loveಬೆಂಗಳೂರು: ಯಗಾದಿ  ಹಾಗೂ ರಂಜಾನ್  ಹಬ್ಬ ಒಟ್ಟಿಗೆ ಬಂದ ಹಿನ್ನೆಲೆ ಕೆಎಸ್‌ಆರ್‌ಟಿಸಿ  ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ