Breaking News
Home / ಜಿಲ್ಲೆ / ಬೆಳಗಾವಿ / ಅಥಣಿ / ಅಥಣಿ ತಾಲೂಕಿನಲ್ಲಿ ಕಳೆದ ನಾಲ್ಕು ದಿನಗಳಿಂದ ಮಳೆ ಕಡಿಮೆಯಾಗಿದ್ದರಿಂದ ನದಿ ತೀರದಲ್ಲಿ ಪ್ರವಾಹ ಇಳಿಮುಖ

ಅಥಣಿ ತಾಲೂಕಿನಲ್ಲಿ ಕಳೆದ ನಾಲ್ಕು ದಿನಗಳಿಂದ ಮಳೆ ಕಡಿಮೆಯಾಗಿದ್ದರಿಂದ ನದಿ ತೀರದಲ್ಲಿ ಪ್ರವಾಹ ಇಳಿಮುಖ

Spread the love

ಅಥಣಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಹಾಗೂ ಅಥಣಿ ತಾಲೂಕಿನಲ್ಲಿ ಕಳೆದ ನಾಲ್ಕು ದಿನಗಳಿಂದ ಮಳೆ ಕಡಿಮೆಯಾಗಿದ್ದರಿಂದ ನದಿ ತೀರದಲ್ಲಿ ಪ್ರವಾಹ ಇಳಿಮುಖವಗುತ್ತಿದ್ದು,  ನದಿ ತೀರದ ಗ್ರಾಮದ ಜನರು  ನಿರಾಳರಾಗಿದ್ದಾರೆ. ಆದ್ರೆ ಈ ಗ್ರಾಮದಲ್ಲಿ ಸಾಂಕ್ರಾಮಿಕ  ರೋಗದ ಭೀತಿ ಎದುರಾಗಿದೆ.

ತಾಲೂಕಿನ ನದಿ ತೀರದ ಗ್ರಾಮಗಳಾದ ಝುಂಜರವಾಡ, ಶಿರಹಟ್ಟಿ, ಸವದಿ, ನದಿ ಇಂಗಳಗಾಂವ, ಜನವಾಡ, ಸಪ್ತಸಾಗರ, ದರೂರ, ಹಲ್ಯಾಳ, ಮಹಿಷವಾಡಗಿ, ಅವರಖೋಡ, ಖವಟಗೊಪ್ಪ, ಸೇರಿದಂತೆ ಇತರೆ ನದಿ ತೀರದ ಗ್ರಾಮಗಳಲ್ಲಿ  ಸೊಳ್ಳ, ಕ್ರಿಮಿ ಕೀಟಗಳ ಕಾಟ ವಿಪರೀತವಾಗಿದೆ.

 ಗ್ರಾಮ ಪಂಚಾಯಿತಿ ಅಧಿಕಾರಿಗಳು ಗ್ರಾಮದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಮುಂದಾಗುತ್ತಿಲ್ಲ, ಗ್ರಾಮದ ಓಣಿಗಳಲ್ಲಿ ಯಾವುದೇ ಕೀಟ ನಿವಾರಣೆಗೆ ಔಷಧ ಸಿಂಪಡಣೆಗೆ ಮುಂದಾಗುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕೊರೊನಾ ಆತಂಕದ ನಡುವೆ ನಮಗೆ ಈ ಸೊಳ್ಳೆಗಳಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ ಎಂದು ಝುಂಜರವಾಡ ಗ್ರಾಮ‌ಸ್ಥರು ತಾಲೂಕು ಆಡಳಿತ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ