Breaking News

ಗೋರಖನಾಥ್​ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಗೋರಖ್​ಪುರದಿಂದ ನಾಮಪತ್ರ ಸಲ್ಲಿಸಿದ ಯೋಗಿ

Spread the love

ಗೋರಖ್​ಪುರ(ಉತ್ತರ ಪ್ರದೇಶ): ಉತ್ತರ ಪ್ರದೇಶ 403 ವಿಧಾನಸಭೆ ಕ್ಷೇತ್ರಗಳ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದೆ. ಇದೇ ತಿಂಗಳ 10ರಂದು ಮೊದಲ ಹಂತದ ಮತದಾನ ನಡೆಯಲಿದೆ. ಹೀಗಾಗಿ ಅನೇಕ ಪಕ್ಷಗಳು ನಾಮಪತ್ರ ಸಲ್ಲಿಕೆ ಮಾಡ್ತಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ​ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಉತ್ತರ ಪ್ರದೇಶದ ಗೋರಖ್​ಪುರ ಕ್ಷೇತ್ರದಿಂದ ಯೋಗಿ ಆದಿತ್ಯನಾಥ ನಾಮಪತ್ರ ಸಲ್ಲಿಕೆ ಮಾಡಿದ್ದು, ಈ ಮೂಲಕ ಮೊದಲ ಸಲ ವಿಧಾನಸಭೆ ಚುನಾವಣಾ ಕಣಕ್ಕಿಳಿದಿದ್ದಾರೆ. ಈಗಾಗಲೇ ಗೋರಖ್​ಪುರ ಸಂಸದೀಯ ಕ್ಷೇತ್ರದಿಂದ ಐದು ಸಲ ಸಂಸದರಾಗಿ ಆಯ್ಕೆಯಾಗಿರುವ ಯೋಗಿ, ಇದೇ ಮೊದಲ ಸಲ ಶಾಸಕ ಸ್ಥಾನಕ್ಕಾಗಿ ಸ್ಪರ್ಧೆ ಮಾಡಿದ್ದಾರೆ.

ನಾಮಪತ್ರ ಸಲ್ಲಿಕೆ ಮಾಡುವುದಕ್ಕೂ ಮುಂಚಿತವಾಗಿ ಗೋರಖನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಕೆ ಮಾಡಿದ ಅವರು, ಹೋಮ-ಹವನದಲ್ಲಿ ಭಾಗಿಯಾದರು. ನಾಮಪತ್ರ ಸಲ್ಲಿಕೆ ಮಾಡಲು ಜಿಲ್ಲಾಧಿಕಾರಿ ಕಚೇರಿಗೆ ತೆರಳುವುದಕ್ಕೂ ಮುಂಚಿತವಾಗಿ ಮಾತನಾಡಿದ ಯೋಗಿ ಆದಿತ್ಯನಾಥ್​​ 300 ಸ್ಥಾನಗಳಲ್ಲಿ ಗೆಲುವು ದಾಖಲು ಮಾಡುವ ಇರಾದೆ ವ್ಯಕ್ತಪಡಿಸಿದ್ದಾರೆ. ಯೋಗಿ ಆದಿತ್ಯನಾಥ್​ ಅವರೊಂದಿಗೆ ಗೃಹ ಸಚಿವ ಅಮಿತ್ ಶಾ ಸಹ ಸಾಥ್ ನೀಡಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ