Breaking News

ಲತಾ ಮಂಗೇಶ್ಕರ್ ಅವರ ಗೌರವಾರ್ಥ ರಾಜ್ಯದಲ್ಲಿ ಎರಡು ದಿನಗಳ ಶೋಕಾಚರಣೆ

Spread the love

ಬೆಂಗಳೂರು : ಭಾನುವಾರ ಮುಂಬೈನಲ್ಲಿ ನಿಧನ ಹೊಂದಿದ ಭಾರತ ರತ್ನ ಪ್ರಶಸ್ತಿ ಪುರಸ್ಕೃತೆ ಗಾಯಕಿ ಲತಾ ಮಂಗೇಶ್ಕರ್ ಅವರ ಗೌರವಾರ್ಥ ಕರ್ನಾಟಕ ಸರಕಾರ ಎರಡು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ.ಅವರ ನಿಧನಕ್ಕೆ ಸರಕಾರ ತೀವ್ರ ದುಃಖವನ್ನು ವ್ಯಕ್ತಪಡಿಸುತ್ತಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

 

” ಅಗಲಿದ ಆತ್ಮದ ಗೌರವಾರ್ಥವಾಗಿ ಫೆಬ್ರವರಿ 6 ಮತ್ತು 7 ರಂದು ರಾಜ್ಯಾದ್ಯಂತ ಶೋಕಾಚರಣೆ ನಡೆಯಲಿದೆ. ಈ ಅವಧಿಯಲ್ಲಿ ಯಾವುದೇ ಅಧಿಕೃತ, ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ಭಾರತದ ತ್ರಿವರ್ಣ ಧ್ವಜ ಅರ್ಧಕ್ಕೆ ಹಾರಲಿದೆ,” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಲತಾ ಮಂಗೇಶ್ಕರ್ ಅವರು 92 ನೇ ವಯಸ್ಸಿನಲ್ಲಿ ಕೋವಿಡ್ ಸೋಂಕಿಗೆ ಒಳಗಾಗಿದ್ದಕ್ಕಾಗಿ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು. ಬಹು ಅಂಗಾಂಗ ವೈಫಲ್ಯದಿಂದ ದಾಖಲಾಗಿ 28 ದಿನಗಳ ನಂತರ ಅವರು ಇಹಲೋಕ ತ್ಯಜಿಸಿದ್ದಾರೆ.


Spread the love

About Laxminews 24x7

Check Also

ಡಿಸಿ ಮುಂದೆ ಅಳಲು ತೋಡಿಕೊಂಡ ನಿರಾಶ್ರಿತರು

Spread the loveಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ಗೋಕಾಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ