ಉಡುಪಿ: ಈಗಾಗಲೇ ಹಿಜಾಬ್ ವಿವಾದದ ( Hijab Row ) ಹಿನ್ನಲೆಯಲ್ಲಿ ಕುಂದಾಪುರದ ಸರ್ಕಾರಿ ಕಾಲೇಜುಗಳಿಗೆ ( Kundapura Government College ) 2 ದಿನ ರಜೆ ಘೋಷಣೆ ಮಾಡಲಾಗಿತ್ತು. ಇದರ ನಡುವೆ ರಾಜ್ಯ ಸರ್ಕಾರ ( Karnataka Government ) ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿ, ಆದೇಶಿಸಿತ್ತು.
ಹೀಗಿದ್ದೂ ಇಂದು ಕಾಲೇಜು ಆರಂಭವಾಗುತ್ತಿದ್ದಂತೆ ವಿದ್ಯಾರ್ಥಿನಿಯರು ಮತ್ತೆ ಹಿಜಾಬ್ ಧರಿಸಿಯೇ ಕಾಲೇಜಿಗೆ ಆಗಮಿಸಿದ್ದಾರೆ. ಹೀಗಾಗಿ ಅವರನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಗಿದೆ.
ಉಡುಪಿ ಜಿಲ್ಲೆಯ ಕುಂದಾಪುರದ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿಯರು ಮತ್ತೆ ಇಂದು ಹಿಜಾಬ್ ಧರಿಸಿಯೇ ಕಾಲೇಜಿಗೆ ಆಗಮಿಸಿದ್ದಾರೆ. ಹಿಜಾಬ್ ಧರಿಸದೇ ತರಗತಿ ಪ್ರವೇಶಕ್ಕೂ ನಿರಾಕರಿಸಿದ ಕಾರಣ, ಅವರನ್ನು ಶಾಲೆಯ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಗಿದೆ.
Laxmi News 24×7