Breaking News

ಲಿಪ್​ಸ್ಟಿಕ್ ಪೆನ್ಸಿಲ್​ ಒಳಗೆ ಚಿನ್ನದ ಪೌಡರ್… ದುಬೈನಿಂದ ಬಂದಾತ ಮಂಗಳೂರಲ್ಲಿ ಸಿಕ್ಕಿಬಿದ್ದ

Spread the love

ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಕಸ್ಟಮ್ಸ್ ಅಧಿಕಾರಿಗಳು 6.27 ಲಕ್ಷ ರೂ. ಮೌಲ್ಯದ ಅಕ್ರಮ ಸಾಗಾಟದ ಚಿನ್ನವನ್ನು ಪತ್ತೆ ಮಾಡಿದ್ದಾರೆ.

ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಆಗ ಈತ ಚಿನ್ನವನ್ನು ಪೌಡರ್ ರೂಪದಲ್ಲಿ ಲಿಪ್ ಸ್ಟಿಕ್ ಪೆನ್ಸಿಲ್ ಒಳಗಡೆ ಮರೆ ಮಾಡಿ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ತಕ್ಷಣ ಆತನನ್ನು ಮತ್ತು ಆತನ ಬಳಿ ಇದ್ದ 24 ಕ್ಯಾರೆಟ್​​ನ 127 ಗ್ರಾಂ ತೂಕದ 6,27,380 ರೂ. ಮೌಲ್ಯದ ಚಿನ್ನವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ