Breaking News

ಚಿಕ್ಕಮಗಳೂರು: ಹಿಜಾಬ್ ಆಯ್ತು, ಕೇಸರಿ ಆಯ್ತು; ಇದೀಗ ನೀಲಿ ಶಾಲು ಸರದಿ

Spread the love

ಚಿಕ್ಕಮಗಳೂರು, ಫೆಬ್ರವರಿ 7: ಉಡುಪಿ ಜಿಲ್ಲೆಯಲ್ಲಿ ಆರಂಭವಾದ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಈಗ ರಾಜ್ಯದಾದ್ಯಂತ ವ್ಯಾಪಿಸಿದೆ. ಕರಾವಳಿ ಮತ್ತು ಮಲೆನಾಡಿನ ವಿದ್ಯಾರ್ಥಿಗಳ ಹಿಜಾಬ್- ಕೇಸರಿ ಶಾಲು ವಿವಾದ ರಾಜ್ಯದಲ್ಲಿ ಮಾತ್ರವಲ್ಲ ದೇಶಾದ್ಯಂತ ಸದ್ದು ಮಾಡುತ್ತಿದೆ.

 

ಕರ್ನಾಟಕದ ಕಾಲೇಜುಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಹೆಚ್ಚಾಗುತ್ತಿರುವ ಬೆನ್ನಲ್ಲೇ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರವನ್ನೇ ಕಡ್ಡಾಯವಾಗಿ ಧರಿಸಬೇಕು ಎಂದು ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ವಸ್ತ್ರ ಸಂಹಿತೆ ಆದೇಶದ ಹೊರತಾಗಿಯೂ ಕುಂದಾಪುರ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯಪುರ ಜಿಲ್ಲೆಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ಧರಿಸಿ ಬಂದಿದ್ದಾರೆ.

ಕೇಸರಿ vs ನೀಲಿ ಶಾಲು

ಹಿಜಾಬ್ ಆಯ್ತು, ಕೇಸರಿ ಶಾಲು ಆಯ್ತು ಇದೀಗ ನೀಲಿ ಶಾಲು ಧರಿಸುವ ಸರದಿಯಾಗಿದೆ. ಚಿಕ್ಕಮಗಳೂರಿನ ಐಡಿಎಸ್‌ಜಿ ಕಾಲೇಜಿನಲ್ಲಿ ನೀಲಿ ಶಾಲು ಪ್ರತ್ಯಕ್ಷವಾಗಿದ್ದು, ಹಿಜಾಬ್ ತೆಗೆಸಬಾರದೆಂದು ನೀಲಿ ಶಾಲು ಧರಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ