ವಿವಾದಾತ್ಮಕ ಹೇಳಿಕೆ: ಎಐಎಂಐಎಂ ರಾಜ್ಯಾಧ್ಯಕ್ಷ ಉಸ್ಮಾನಗಣಿ ಹುಮನಾಬಾದ್ ಬಂಧನ

Spread the love

ಬಾಗಲಕೋಟೆ: ಭಾರತ ಮಾತೆ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದ ಎಐಎಂಐಎಂ ರಾಜ್ಯಾಧ್ಯಕ್ಷ ಉಸ್ಮಾನಗಣಿ ಹುಮನಾಬಾದ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಇತ್ತೀಚೆಗೆ ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದಲ್ಲಿ ನಡೆದಿದ್ದ ಡಾ.ಎಪಿಜೆ ಅಬ್ದುಲ್ ಕಲಾಂ ವೃತ್ತ ಉದ್ಘಾಟನೆ ಕಾರ್ಯಕ್ರದಲ್ಲಿ ಉಸ್ಮಾನಗಣಿ ಹುಮನಾಬಾದ್, ಭಾರತ ಮಾತೆ ತಾಯಿ ಎನ್ನುವ ವಿಚಾರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ.

 

ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದನ್ನು ಗಮನಿಸಿದ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದರು. ಘಟನೆ ಬೆನ್ನಲ್ಲ ಉಸ್ಮಾನಗಣಿ ಹುಮ್ನಾಬಾದ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮೂಲಕ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಉಸ್ಮಾನಗಣಿ ಕ್ಷಮೆಯಾಚಿಸುವಂತೆ ಆಗ್ರಹ ವ್ಯಕ್ತವಾಗಿತ್ತು. ಜನರ ಆಕ್ರೋಶ ಬೆನ್ನಲ್ಲೇ ಉಸ್ಮಾನಗಣಿ ತಲೆಮರೆಸಿಕೊಂಡಿದ್ದ.

ಸುಳಿವಿನ ಮೇರೆಗೆ ಪೊಲೀಸರು ಆತನನ್ನು ಅಜ್ಞಾತ ಸ್ಥಳದಿಂದ ಬಂಧಿಸಿದ್ದಾರೆ. ಪ್ರಕರಣದಲ್ಲಿ ಉಸ್ಮಾಂಗನಿ ಈಗಾಗಲೇ ನಿರೀಕ್ಷಣಾ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ