ಕನ್ನಡದ ಸಮನ್ವಯ ಕವಿ, ಕನ್ನಡದ ಖ್ಯಾತ ವಿದ್ವಾಂಸ ಧಾರವಾಡ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರು ಪ್ರಸಾರಂಗದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ ನಾಡೋಜ ಪ್ರಶಸ್ತಿ, ಕರ್ನಾಟಕ ಕವಿರತ್ನ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಹಾಗೂ ಇನ್ನೂ ಅನೇಕ ಪ್ರಶಸ್ತಿಗಳಿಗೆ ಭಾಜನರಾದ ನಮ್ಮ ಹಿರಿಯರು ಆದ ಶ್ರೀ ಚನ್ನವೀರ ಕಣವಿ ಅವರು ನಿಧನರಾದ ಸುದ್ದಿ ಕೇಳಿ ಅತೀವ ಸಂತಾಪವಾಗಿದೆ.
ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ, ಅವರ ಕುಟುಂಬದವರಿಗೆ ಮತ್ತು ಅವರ ಸಾರಸ್ವತ ಲೋಕದ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿ.