ಹಿಜಾಬ್-ಕೇಸರಿ ಶಾಲು ವಿವಾದದ ಮಧ್ಯೆ ರಾಜ್ಯದಲ್ಲಿ ಇಂದಿನಿಂದ ಕಾಲೇಜುಗಳು ಪ್ರಾರಂಭವಾಗಿವೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ಕಾಲೇಜ್ ಗೇಟ್ ಬಳಿ ನಿಂತು ಪೊಲೀಸ್ ಸಿಬ್ಬಂದಿ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.ರಾಜ್ಯಾದ್ಯಂತ ಇಂದಿನಿಂದ ಕಾಲೇಜುಗಳು ಪ್ರಾರಂಭವಾಗಿವೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಪೊಲೀಸರು ನಗರದ ಎಲ್ಲಾ ಕಾಲೇಜುಗಳ ಮುಂದೆ ವ್ಯಾಪಕ ಕಟ್ಟೆಚ್ಚರ ವಹಿಸಿದ್ದು, ಎಲಲಾ ಕಾಲೇಜುಗಳ ಮುಂದೆ ಪೆÇೀಲಿಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಿದ್ದಾರೆ. ಪ್ರತಿಯೊಂದು ಕಾಲೇಜಿನ ಮುಂದೆ ನಾಲ್ಕು ಜನ ಪೆÇೀಲಿಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದಾರೆ.
