Breaking News

ಮಲಪ್ರಭಾ ಅಚ್ಚಕಟ್ಟು ಪ್ರದೇಶದ ರಸ್ತೆ ದುರಸ್ತಿಗೆ ಕ್ರಮ: ಗೋವಿಂದ ಕಾರಜೋಳ

Spread the love

ವಿಧಾನಸಭೆ : ಮಲಪ್ರಭಾ ಯೋಜನೆಯ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ರಸ್ತೆಗಳ ದುರಸ್ತಿಗಾಗಿ ಕರ್ನಾಟಕ ನೀರಾವರಿ ನಿಗಮದಿಂದ ಅಂದಾಜು ಪಟ್ಟಿ ತಯಾರಿಸಲಾಗುತ್ತಿದ್ದು, ಆದಷ್ಟೂ ಶೀಘ್ರ ಅನುಮತಿ ಕೊಟ್ಟು ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ತಿಳಿಸಿದ್ದಾರೆ.

 

ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್‌ನ ಮಹಾಂತೇಶ್‌ ಕೌಜಲಗಿಯವರ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ಸವದತ್ತಿ ತಾಲ್ಲೂಕಿನ ಏಣಗಿ-ಹಳೆ ಏಣಗಿ ಮಲ್ಲೂರು-ಜಾಕವೆಲ್‌ ರಸ್ತೆ, ಬಡ್ಲಿ-ಹಳೇ ಬಡ್ಲಿ, ಸುತಗಟ್ಟಿ-ಹಿಟ್ಟಣಗಿ-ಏಣಗಿ ರಸ್ತೆಗಳ ದುರಸ್ಥಿಗೆ ಕ್ರಮ ಕೈಗೊಳ್ಳಲಾಗಿದೆ.ಏಣಗಿ-ಹಳೆ ಏಣಗಿ ಗ್ರಾಮದವರೆಗಿನ 6 ಕಿ.ಮೀ ಉದ್ದದ ರಸ್ತೆಗೆ ಈಗಾಗಲೇ 3.06 ಕೋಟಿ ರೂ. ಅಂದಾಜು ಪಟ್ಟಿ ತಯಾರಿಸಲಾಗಿದ್ದು, ಆದಷ್ಟೂ ಬೇಗ ಆಡಳಿತಾತ್ಮಕ ಮಂಜೂರಾತಿ ನೀಡಲಾಗುವುದು ಎಂದು ಹೇಳಿದರು.

ಬೈಲ ಹೊಂಗಲ ತಾಲ್ಲೂಕಿನ 15 ಗ್ರಾಮಗಳು ಹಾಗೂ ಸವದತ್ತಿ ತಾಲ್ಲೂಕಿನ 12 ಗ್ರಾಮಗಳು ಮಲಪ್ರಭಾ ಯೋಜನೆಯ ಮುಳುಗಡೆ ಪ್ರದೇಶದ ವ್ಯಾಪ್ತಿಯಲ್ಲಿದ್ದು, ಈ ಪುನರ್‌ ವಸತಿ ಗ್ರಾಮಗಳ ವ್ಯಾಪ್ತಿಯಲ್ಲಿನ ಪ್ರದೇಶವು ಕಪ್ಪು ಮಣ್ಣಿನಿಂದ ಕೂಡಿದ್ದು, ಈ ಕಪ್ಪು ಮಿಶ್ರಿತ ಮಣ್ಣಿನಿಂದ ಕೂಡಿದ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ಹೇಳಿದರು.

ಇದಕ್ಕೂ ಮುನ್ನ ಮಾತನಾಡಿದ ಮಹಾಂತೇಶ್‌ ಕೌಜಲಗಿ, ಆ ಭಾಗರದಲ್ಲಿ ಓಡಾಡಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಆದಷ್ಟು ಬೇಗ ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದರು.

ಸಕಲೇಶಪುರ ಕ್ಷೇತ್ರಕ್ಕೆ ಅನುದಾನದ ಕೊರತೆಯಾಗಿಲ್ಲ : ಕಾರಜೋಳ
ವಿಧಾನಸಭೆ: ಜಲ ಸಂಪನ್ಮೂಲ ಇಲಾಖೆಯಿಂದ ಎಸ್‌ಸಿಪಿ-ಟಿಎಸ್‌ಪಿ ಯೋಜನೆಯಡಿಯಲ್ಲಿ ಸಕಲೇಶಪುರ ಕ್ಷೇತ್ರಕ್ಕೆ 13 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಅಲ್ಲಿಯ ಕಾಮಗಾರಿಗಳಿಗೆ ತಾರತಮ್ಯ ಎಸಗಿಲ್ಲ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‌ನ ಎಚ್‌.ಕೆ.ಕುಮಾರಸ್ವಾಮಿ ಪ್ರಸ್ತಾಪಕ್ಕೆ ಉತ್ತರಿಸಿದ ಆವರು, 2015 -16 ರಿಂದ ಸಕಲೇಶಪುರ ಕ್ಷೇತ್ರದ ರಸ್ತೆಗಳಿಗೆ 223 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಹೇಳಿದರು.

ನೀರಾವರಿ ಇಲಾಖೆಯ ರಸ್ತೆ ಕಾಮಗಾರಿಗಳನ್ನು ಅವಶ್ಯಕತೆ ಆಧಾರದ ಮೇಲೆ ಕೈಗೊಳ್ಳಲಾಗುತ್ತದೆ ಹೊರತು ಬೇರೆ ಯಾವುದೇ ಮಾನದಂಡವನ್ನು ಅನುಸರಿಸುವುದಿಲ್ಲ ಎಂದು ಹೇಳಿದರು.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ