ಚಿಕ್ಕಬಳ್ಳಾಪುರ: ಬಾವಿಯಲ್ಲಿ ಬಿದ್ದು 4ನೇ ತರಗತಿಯ 10 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಶಾಮರಾವ್ ಹೊಸಪೇಟೆ ಗ್ರಾಮದಲ್ಲಿ ನಡೆದಿದೆ.
ರುಷ್ಮಿತಾ ಮೃತ ಮಗು. ನಿನ್ನೆ ಸಂಜೆ ಶಾಲೆಯಿಂದ ಬಂದ ರುಷ್ಮಿತಾ ಮನೆಯ ಪಕ್ಕದಲ್ಲೇ ಕೂಗಳತೆ ದೂರದ ಜಮೀನು ಬಳಿ ತೆರಳಿದ್ದು, ಜಮೀನಿನಲ್ಲಿರುವ ಬಾವಿಯಲ್ಲಿ ಬಿದ್ದಿದ್ದಾಳೆ. ರುಷ್ಮಿತಾ ಕಾಣಿಸುತ್ತಿಲ್ಲ ಎಂದು ಹುಡುಕಾಡಿದಾಗ ಬಾವಿಯ ಬಳಿ ಬಾಲಕಿಯ ಚಪ್ಪಲಿಯೊಂದು ಪತ್ತೆಯಾಗಿದ್ದು, ಬಾವಿಯಲ್ಲಿ ಶೋಧ ನಡೆಸಿದಾಗ ರುಷ್ಮಿತಾಳ ಮೃತದೇಹ ಪತ್ತೆಯಾಗಿದೆ.ಅಗ್ನಿಶಾಮಕ ದಳ ಹಾಗೂ ಸ್ಥಳೀಯರ ನೆರವಿನಿಂದ ರುಷ್ಮಿತಾಳ ಮೃತದೇಹವನ್ನು ಚಿಂತಾಮಣಿ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಈ ಸಂಬಂಧ ರುಷ್ಮಿತಾಳ ತಾಯಿ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅನುಮಾನಸ್ಪದ ಅಸಹಜ ಸಾವು ಎಂಬ ದೂರು ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.