Breaking News

ಪೊಲೀಸರಿಗೆ ಸಿಎಂ ಬೊಮ್ಮಾಯಿ ಹಿಗ್ಗಾಮುಗ್ಗಾ ತರಾಟೆ

Spread the love

ಬೆಂಗಳೂರು,ಫೆ.16- ಮುಖ್ಯಮಂತ್ರಿಗಳನ್ನು ಭೇಟಿಯಾಗಲು ಬಂದಿದ್ದ ಸಾರ್ವಜನಿಕರಿಗೆ ಪ್ರವೇಶಿಸಲು ಅಡ್ಡಿಪಡಿಸಿದ ಪೊಲೀಸರನ್ನು ಸಿಎಂ ಬೊಮ್ಮಾಯಿ ಅವರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಪ್ರಸಂಗ ಇಂದು ಬೆಳಗ್ಗೆ ನಡೆದಿದೆ.

ಬೆಂಗಳೂರಿನ ಆರ್.ಟಿ ನಗರದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸದ ಬಳಿ ಕುಂದುಕೊರತೆಗಳನ್ನು ಹೇಳಿ ಪರಿಹಾರ ಪಡೆದುಕೊಳ್ಳಲು ಸಾರ್ವಜನಿಕರು ಆಗಮಿಸಿದ್ದರು.

ಆದರೆ ಭದ್ರತಾ ಹಿತದೃಷ್ಟಿಯಿಂದ ಪೊಲೀಸರು ಸಾರ್ವಜನಿಕರಿಗೆ ಸಿಎಂ ಭೇಟಿ ಮಾಡಲು ಅವಕಾಶ ಕೊಡಲಿಲ್ಲ. ಇದರಿಂದ ಕುಪಿತರಾದ ಜನರು ಮುಖ್ಯಮಂತ್ರಿಗಳು ಬರುತ್ತಿದ್ದಂತೆ ಪೊಲೀಸರ ವಿರುದ್ಧ ದೂರು ನೀಡಿದರು. ಕೆರಳಿ ಕೆಂಡವಾದ ಸಿಎಂ ಸಾರ್ವಜನಿಕರನ್ನು ಬಿಡದ ಪೊಲೀಸರ ಮೇಲೆ ಸಿಎಂ ಗರಂ ಆಗಿ, ರೀ ಯಾಕ್ರೀ ಅವರನ್ನು ಬಿಟ್ಟಿಲ್ಲ ಎಂದು ಪೊಲೀಸರ ವಿರುದ್ಧ ಗುಡುಗಿದರು.

ನನ್ನನ್ನು ಭೇಟಿ ಮಾಡಲು ಬಂದವರನ್ನು ಭದ್ರತಾ ನೆಪವೊಡ್ಡಿ ಅಡ್ಡಿಪಡಿಸುವುದು ಸರಿಯಲ್ಲ. ಅವರು ತಮ್ಮ ಕಷ್ಟಗಳನ್ನು ಹೇಳಿಕೊಳ್ಳಲು ನಮ್ಮ ಬಳಿ ಬರುತ್ತಾರೆ. ನೀವು ಬಿಡದಿದ್ದರೆ ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದರು.

ಇನ್ನು ಮುಂದೆ ಈ ರೀತಿ ಪದೇ ಪದೇ ದೂರು ಬಂದರೆ ನಾನು ಸಹಿಸುವುದಿಲ್ಲ. ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟರು.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ