ಬೆಳಗಾವಿ: 2 ವರ್ಷಗಳ ಬಳಿಕ ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ ಇಂದು ಭಕ್ತರು ಭಾರತ ಹುಣ್ಣಿಮೆ ಸಂಭ್ರಮಾಚರಣೆ ಮಾಡಲಿದ್ದಾರೆ.
ಜಿಲ್ಲೆಯ ಸವದತ್ತಿ ಹೊರವಲಯದಲ್ಲಿರುವ ಸುಪ್ರಸಿದ್ಧ ದೇವಸ್ಥಾನ ಇದಾಗಿದ್ದು, ಕೋವಿಡ್ ಹಿನ್ನೆಲೆ ದೇವಸ್ಥಾನವು 2 ವರ್ಷಗಳಿಂದ ಬಂದ್ ಆಗಿತ್ತು. ಭಕ್ತರ ದಂಡೇ ದೇವಸ್ಥಾನಕ್ಕೆ ಹರಿದು ಬರುತ್ತಿದ್ದು, ಕರ್ನಾಟಕ, ಮಹಾರಾಷ್ಟ್ರ, ಗೋವಾ ಸೇರಿ ವಿವಿಧೆಡೆಯಿಂದ ಆಗಮಿಸುತ್ತಿದ್ದಾರೆ. ಭಾರತ ಹುಣ್ಣಿಮೆ ನಿಮಿತ್ಯ ರೇಣುಕಾ ಯಲ್ಲಮ್ಮ ದೇವಿ ಸನ್ನಿಧಿಯಲ್ಲಿ ಬೃಹತ್ ಜಾತ್ರೆ ನಡೆಯಲಿದೆ.
ಇಂದು ಸುಮಾರು 10 ರಿಂದ 15 ಲಕ್ಷ ಭಕ್ತರು ಸೇರುವ ನಿರೀಕ್ಷೆಯಿದೆ. ಚಕ್ಕಡಿ, ಕಾರು, ವಿಶೇಷ ಬಸ್‍ಗಳಲ್ಲಿ ತಂಡೋಪತಂಡವಾಗಿ ಯಲ್ಲಮ್ಮ ದೇವಸ್ಥಾನಕ್ಕೆ ಭಕ್ತರ ದಂಡು ಹರಿದುಬರುತ್ತಿದೆ. ಯಲ್ಲಮ್ಮಗುಡ್ಡಕ್ಕೆ ಸಂಪರ್ಕ ಕಲ್ಪಿಸುವ ಉಗರಗೋಳ, ಜೋಗುಳಬಾವಿ, ನೂಲಿನ ಗಿರಣಿ ಮಾರ್ಗದಲ್ಲಿ ಬ್ಯಾರಿಕೇಡ್‍ಗಳ ಅಳವಡಿಕೆ ಮಾಡಲಾಗಿದೆ. ಗುಡ್ಡದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಗುಡ್ಡದಲ್ಲಿ 52 ಸಿಸಿ ಕ್ಯಾಮರಾಗಳ ಅಳವಡಿಸಲಾಗಿದೆ.
Laxmi News 24×7