ನವದೆಹಲಿ: ಗ್ರಾಹಕರ ಸೇವೆಯಲ್ಲಿ ಏರ್ ಇಂಡಿಯಾ ಅತ್ಯುತ್ತಮವಾಗಬೇಕೆಂದು ನಾವು ಬಯಸುತ್ತೇವೆ. ಏರ್ ಇಂಡಿಯಾ ವಿಶ್ವದಲ್ಲೇ ತಾಂತ್ರಿಕವಾಗಿ ಮುಂದುವರಿದ ಸಂಸ್ಥೆಯಾಗಬೇಕೆಂದು ನಾವು ಬಯಸುತ್ತೇವೆ ಎಂದು ಟಾಟಾ ಸನ್ಸ್ ಅಧ್ಯಕ್ಷ ಎನ್ ಚಂದ್ರಶೇಕರನ್ ತಿಳಿಸಿದ್ದಾರೆ.
ಚಂದ್ರಶೇಖರನ್ ಇತ್ತೀಚೆಗೆ ಸಂದೇಶವನ್ನು ನೀಡಿದ್ದು, ಏರ್ ಇಂಡಿಯಾವನ್ನು ವಿಶ್ವ ದರ್ಜೆಗೆ ತರಲು ಟಾಟಾ ಗ್ರೂಪ್ ಬದ್ಧವಾಗಿದೆ. ಗ್ರಾಹಕರ ಸೇವೆಯಲ್ಲಿ ಏರ್ ಇಂಡಿಯಾವನ್ನು ಅತ್ಯುತ್ತಮವಾಗಿಸಲು ಕಂಪನಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದ್ದಾರೆ.
ಏರ್ ಇಂಡಿಯಾವನ್ನು ಜನವರಿ 27ರಂದು ಟಾಟಾ ಗ್ರೂಪ್‌ಗೆ ಹಸ್ತಾಂತರಿಸಲಾಯಿತು. ಬಿಡ್ಡಿಂಗ್ ಪ್ರಕ್ರಿಯೆ ಮೂಲಕ ಟಾಟಾ ಕಂಪನಿ 69 ವರ್ಷಗಳ ಬಳಿಕ ಏರ್ ಇಂಡಿಯಾವನ್ನು 18,000 ಕೋಟಿ ರೂ.ಗೆ ಕೊಂಡುಕೊಂಡಿತು.
ಇದಕ್ಕೂ ಮೊದಲು ಟಾಟಾ ಗ್ರೂಪ್ ಅಧ್ಯಕ್ಷ ರತನ್ ಟಾಟಾ, ಟಾಟಾ ಗ್ರೂಪ್ ಏರ್ ಇಂಡಿಯಾದ ಹೊಸ ಗ್ರಾಹಕರನ್ನು ಸ್ವಾಗತಿಸುತ್ತದೆ. ಪ್ರಯಾಣಿಕರ ಸೌಕರ್ಯ ಹಾಗೂ ಸೇವೆಯ ವಿಷಯದಲ್ಲಿ ಏರ್ ಇಂಡಿಯಾವನ್ನು ಆಯ್ಕೆಯ ಏರ್‌ಲೈನ್ ಮಾಡಲು ಒಟ್ಟಾಗಿ ಕೆಲಸ ಮಾಡಲು ಉತ್ಸುಕರಾಗಿದ್ದೇವೆ ಎಂದಿದ್ದರು.
Laxmi News 24×7