ಪೊಲೀಸ್ ಪೇದೆ ದಾಂಪತ್ಯದಲ್ಲಿ ಕಲಹ – ಪತ್ನಿ ಆತ್ಮಹತ್ಯೆ

Spread the love

ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗಂಡ-ಹೆಂಡತಿ ಜಗಳವಾಡಿದ್ದು, ಪರಿಣಾಮ ಹೆಂಡತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಣಕನೂರು ಗ್ರಾಮದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೇದೆ ಸುರೇಂದ್ರ ಅವರ ಪತ್ನಿ ಸ್ನೇಹಾ(25) ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುದ್ದಿ ತಿಳಿದ ತಕ್ಷಣ ಸುರೇಂದ್ರ ಸಹ ಚಾಕುವಿನಿಂದ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪ್ರಸ್ತುತ ಸುರೇಂದ್ರ ಅವರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. 

ಸ್ನೇಹಾ ಮೃತದೇಹವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಿಲಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಮೃತಳ ಪೋಷಕರು ಹಾಗೂ ಸಂಬಂಧಿಕರ ಆಗಮನಕ್ಕಾಗಿ ಕಾದಿದ್ದು, ಪೋಷಕರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ಮುಂದಾಗಿದ್ದಾರೆ.

 


Spread the love

About Laxminews 24x7

Check Also

ವಾಟಾಳ್ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಶಿವರಾಜ್ ತಂಗಡಗಿ

Spread the loveಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸ ಸರ್ಕಾರ ಮಾಡಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ