ಮೈಸೂರು: ಪ್ರಾಣಿ, ಪಕ್ಷಿಗಳು ಎಂದರೆ ದರ್ಶನ್‌ಗೆ ಎಲ್ಲಿಲ್ಲದ ಪ್ರೀತಿ. ಆ ಪ್ರೀತಿಗೆ ಗೌರವ ಸೂಚಿಸುವ ಸಲುವಾಗಿ ಕರ್ನಾಟಕ ಮೃಗಾಲಯ ಪ್ರಾಧಿಕಾರವು ದರ್ಶನ್ ಅವರನ್ನು ಅಧಿಕೃತ ರಾಯಭಾರಿಯನ್ನಾಗಿ ನೇಮಕ ಮಾಡಿಕೊಂಡಿದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟುಹಬ್ಬದ ಅಂಗವಾಗಿ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾದ ಎಲ್.ಆರ್.
ಮಹದೇವಸ್ವಾಮಿ ಅವರು ಭೇಟಿ ಮಾಡಿ ಈ ವಿಚಾರ ತಿಳಿಸಿದ್ದಾರೆ. ಹುಟ್ಟುಹಬ್ಬಕ್ಕೆ ಮೃಗಾಲಯ ಪ್ರಾಧಿಕಾರದ ವತಿಯಿಂದ ಶುಭಾಶಯ ಕೋರುವುದರ ಜೊತೆಗೆ ದರ್ಶನ್ ಅವರಿಗೆ ಒಳ್ಳೆಯ ಗೌರವ ಒದಗಿಸಲಾಗಿದೆ ಎಂದು ಹಲವಾರು ದರ್ಶನ್ ಅಭಿಮಾನಿಗಳು ಅಭಿಪ್ರಾಯಪಟ್ಟಿದ್ದಾರೆ.