ಹೊಸದಿಲ್ಲಿ: ನೀಟ್ , ಜೆಇಇ ಪರೀಕ್ಷೆಗಳನ್ನು ಮುಂದೂಡುವಂತೆ ಒತ್ತಾಯಿಸಿ ಕಾಂಗ್ರೆಸ್ ನೇತೃತ್ವದಲ್ಲಿ ದೇಶದಾದ್ಯಂತ ನಾಳೆ ಪ್ರತಿಭಟನೆ ನಡೆಯಲಿದೆ.
ತೀವ್ರ ವಿರೋಧದ ನಡುವೆಯೂ ನೀಟ್ ಪರೀಕ್ಷೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಕೇಂದ್ರ ಸರ್ಕಾರ ಆದೇಶದ ಮೇರೆಗೆ ನೀಟ್ ಯುಜಿ-2020 ಪರೀಕ್ಷೆಗಳು ಸೆ.13ರಂದು ನಡೆಯಲಿವೆ.ಎಂಜಿನಿಯರಿಂಗ್ ಪ್ರವೇಶದ ಜೆಇಇ ಪರೀಕ್ಷೆ ಸೆ. 1-6ರವರೆಗೆ ನಿಗದಿಯಾಗಿದೆ.
ಕೊರೊನಾ ಸಂದರ್ಭದಲ್ಲಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಪರೀಕ್ಷೆಯನ್ನು ಮುಂದೂಡಬೇಕು. ಕೊರೊನಾ ಪರಿಸ್ಥಿತಿ ಸುಧಾರಿಸಿದ ಮೇಲೆ ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ನಡೆಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ.
ಕೊರೊನಾ ಆತಂಕದ ನಡುವೆ ನೀಟ್ ಪರೀಕ್ಷೆಗೆ ಅನುಮತಿ ನೀಡಿದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸಭೆ ನಡೆಸಿ, ತೀರ್ಮಾನ ಕೈಗೊಂಡಿದ್ದಾರೆ.