ನಗರದ ವಾಹನ ಸವಾರರಿಗೆ ಸಿಹಿಸುದ್ದಿ. ಸುಮಾರು 56 ದಿನಗಳ ಬಳಿಕ ಡಾ. ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ ಲಘು ವಾಹನಗಳ ಸಂಚಾರಕ್ಕೆ ಬುಧವಾರ ಮುಕ್ತವಾಗಿದೆ.
ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ ಲಘು ವಾಹನಗಳ ಸಂಚಾರಕ್ಕೆ ಬುಧವಾರ ಮುಕ್ತವಾಗಿದೆ.
ಪೀಣ್ಯ ಎಲಿವೇಡೆಡ್ ಮೇಲ್ಸೆತುವೆಯ 102 ಮತ್ತು 103ನೇ ಕಂಬಗಳ ನಡುವೆ ತಾಂತ್ರಿಕ ದೋಷವಿದೆ ಎಂದು ಡಿಸೆಂಬರ್ 26ರಂದು ಫ್ಲೈ ಓವರ್ ಎರಡೂ ಕಡೆ ವಾಹನ ಸಂಚಾರ ಬಂದ್ ಮಾಡಲಾಗಿತ್ತು. ಎನ್‌ಎಚ್‌ಎಐ ದುರಸ್ತಿ ಕಾಮಗಾರಿ ಪೂರ್ಣಗೊಳಿಸಿದೆ.
ಬುಧವಾರ ಸಂಜೆಯಿಂದಲೇ ಕಾರು, ಬೈಕ್, ಆಟೋಗಳ ಸಂಚಾರಕ್ಕೆ ಫ್ಲೈ ಓವರ್ ಮೇಲೆ ಅವಕಾಶ ನೀಡಲಾಗಿದೆ. ಬಸ್, ಲಾರಿ ಸೇರಿದಂತೆ ಭಾರೀ ವಾಹನಗಳ ಸಂಚಾರಕ್ಕೆ ಅನುಮತಿ ಇಲ್ಲ. ಪೀಣ್ಯ ಸಂಚಾರಿ ಠಾಣೆ ಪೊಲೀಸರು ಈ ಕುರಿತು ಟ್ವೀಟ್ ಮಾಡಿದ್ದಾರೆ.
ಸುಮಾರು 56 ದಿನಗಳಿಂದ ಪೀಣ್ಯ ಫ್ಲೈ ಓವರ್ ಮೇಲೆ ಎರಡೂ ಕಡೆ ವಾಹನ ಸಂಚಾರ ಬಂದ್ ಆಗಿತ್ತು. ಇದರಿಂದಾಗಿಗ ಹೊರ ಜಿಲ್ಲೆಗಳಿಂದ ಬೆಂಗಳೂರು ನಗರಕ್ಕೆ ಬರುವ ಮತ್ತು ಬೆಂಗಳೂರು ನಗರದಿಂದ ಹೊರ ಹೋಗುವ ವಾಹನಗಳಿಗೆ ತೊಂದರೆಯಾಗಿತ್ತು. ಪ್ರತಿದಿನ ಕಿ. ಮೀ. ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಲ್ಲುತ್ತಿದ್ದವು.