ಬೆಂಗಳೂರು: ‘ರಾಜ್ಯದ ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಮಾಡಿಲ್ಲ.
ಈ ವಿಷಯದಲ್ಲಿ ಹೈಕೋರ್ಟ್ ಆದೇಶವನ್ನು ಪಾಲನೆ ಮಾಡುತ್ತಿದ್ದೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.
ವಿಧಾನಸಭೆಯಲ್ಲಿ ಬುಧವಾರ ಶೂನ್ಯ ವೇಳೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಅಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಚಾಮರಾಜನಗರದಲ್ಲಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸ್ಪಷ್ಟನೆ ನೀಡಬೇಕು’ ಎಂದು ಒತ್ತಾಯಿಸಿದರು.
ಬಸವರಾಜ ಬೊಮ್ಮಾಯಿ ಉತ್ತರಿಸಿ, ‘ಉನ್ನತ ಶಿಕ್ಷಣ ಸಚಿವರು ವಾಸ್ತವಾಂಶ ಹೇಳಿದ್ದಾರೆ. ಅದು ಸರ್ಕಾರದ ನಿಲುವು ಸಹ ಹೌದು’ ಎಂದು ಹೇಳಿದರು.
Laxmi News 24×7