Breaking News

KSRTC ಬಸ್-ಬೈಕ್ ಮುಖಾಮುಖಿ ಡಿಕ್ಕಿ

Spread the love

ಚಿಕ್ಕೋಡಿ: KSRTC ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೆ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಚಿಕ್ಕೋಡಿ ಪಟ್ಟಣದ ಹೊರವಲಯದ ಕೆರೂರ ಕ್ರಾಸ್ ಬಳಿಯ ಚಿಕ್ಕೋಡಿ-ಮಿರಜ ರಾಜ್ಯ ಹೆದ್ದಾರಿಯಲ್ಲಿ ಬಸ್-ಬೈಕ್ ನಡುವೆ ಅಪಘಾತ ಸಂಭವಿಸಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಮೇಲೆಯೇ ಬಸ್ ಎಗರಿದೆ. ಪರಿಣಾಮ ಚಿಕ್ಕೋಡಿಯಿಂದ ಅಂಕಲಿಗೆ ಕೂಲಿ ಕೆಲಸಕ್ಕೆ ತೆರಳುತ್ತಿದ್ದ ಇಬ್ಬರು ಕಾರ್ಮಿಕರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. 

ಚಿಕ್ಕೋಡಿ ಪಟ್ಟಣದ ನಿವಾಸಿಗಳಾದ ಶ್ರೀಶೈಲ ಕೋರವಿ(27) ಹಾಗೂ ಸಂತೋಷ್ ಹುಜರೆ(28) ಸ್ಥಳದಲ್ಲೇ ಸಾವನ್ನಪ್ಪಿದ ಕಾರ್ಮಿಕರು. ಅಪಘಾತದ ಬಳಿಕ ಬಸ್ ಬಿಟ್ಟು ಚಾಲಕ ಹಾಗೂ ನಿರ್ವಾಹಕ ಪರಾರಿಯಾಗಿದ್ದು, ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು.

ಸ್ಥಳಕ್ಕೆ ಚಿಕ್ಕೋಡಿ ಸಿಪಿಐ ಪಾಟೀಲ್, ಅಂಕಲಿ ಪೊಲೀಸ್ ಠಾಣೆ ಪಿಎಸ್‍ಐ ಭರತ್, ಎನ್.ಎಸ್.ಪರಮಾನಟ್ಟಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


Spread the love

About Laxminews 24x7

Check Also

2026ರ ಮೊದಲ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ಹೋಳಿ ಹಬ್ಬದಂದೇ ಯಾರಿಗೆ ಅದೃಷ್ಟ? ಯಾರಿಗೆ ಎಚ್ಚರಿಕೆ?

Spread the love2026ರ ವರ್ಷವು ಆಧ್ಯಾತ್ಮಿಕವಾಗಿ ಸಂಚಲನ ಮೂಡಿಸಲು ಸಜ್ಜಾಗಿದೆ. ಈ ಬಾರಿ ಬಣ್ಣಗಳ ಹಬ್ಬ ಹೋಳಿಯ ಸಂಭ್ರಮದ ನಡುವೆಯೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ