Home / ರಾಜಕೀಯ / ಹರಕು ಬಾಯಿ ಈಶ್ವರಪ್ಪ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ: ಹರಕು ಬಾಯಿ ಈಶ್ವರಪ್ಪ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ.

ಹರಕು ಬಾಯಿ ಈಶ್ವರಪ್ಪ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ: ಹರಕು ಬಾಯಿ ಈಶ್ವರಪ್ಪ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ.

Spread the love

ಬೆಂಗಳೂರು: ಹರಕು ಬಾಯಿ ಈಶ್ವರಪ್ಪ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಆತ ಮೊದಲು ಸಚಿವ ಸ್ಥಾನದಿಂದ ಕೆಳಗೆ ಇಳಿಯಬೇಕು. ನಮ್ಮಪ್ಪನ ಬಗ್ಗೆ ಅವರು ಮಾತನಾಡಿದ್ದಾರೆ. ಬೇಕಾದರೆ ನಮ್ಮಪ್ಪನನ್ನು ಭೇಟಿ ಮಾಡಲಿ. ಈ ವಿಚಾರವಾಗಿ ಸಮಯ ಬಂದಾಗ ಅವರಿಗೆ ಉತ್ತರ ನೀಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ವಿಧಾನಸೌಧಸಲ್ಲಿ ಈಶ್ವರಪ್ಪ ವಿರುದ್ಧ ವಾಗ್ದಾಳಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಆತ ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜ ಬದಲಿಗೆ ಕೇಸರಿ ಧ್ವಜ ಹಾರಿಸಲು ಬಯಸಿದ್ದು, ಇದು ದೇಶದ ಕಾನೂನಿಗೆ ವಿರುದ್ಧವಾಗಿದೆ. ಅವರು ಸಂವಿಧಾನ ಬದಲಿಸಲು, ರಾಷ್ಟ್ರಧ್ವಜ ಬದಲಿಸಲು ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ಈಶ್ವರಪ್ಪ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬುದೇ ನಮ್ಮ ಆಗ್ರಹ. ಹೀಗಾಗಿ ನಾವು ಅಹೋರಾತ್ರಿ ವಿಧಾನಸಭೆಯಲ್ಲಿ ಧರಣಿ ಮಾಡುತ್ತೇವೆ ಎಂದರು. ರೈತರು ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜದ ಕೆಳಭಾಗದಲ್ಲಿ ರೈತರ ಧ್ವಜ ಹಾರಿಸಲು ಮುಂದಾದಾಗ ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲಿಲ್ಲವೇ? ಅದೇ ರೀತಿ ಈಶ್ವರಪ್ಪ ವಿರುದ್ಧವೂ ದೇಶದ್ರೋಹ ಪ್ರಕರಣ ದಾಖಲಿಸಬೇಕು. ನಾವು ಕೇಸರಿ ಧ್ವಜ ಹಾರಿಸುತ್ತೇವೆ, ಅದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದು ಅವರೇ ಹೇಳಿದ್ದಾರೆ. ಅವರ ಹೇಳಿಕೆಯನ್ನು ಇಡೀ ಬಿಜೆಪಿ ಪಕ್ಷ ಸಮರ್ಥಿಸಿಕೊಳ್ಳುತ್ತಿದೆ. ಹೀಗಾಗಿ ಈ ಪ್ರಕರಣದಲ್ಲಿ ಕೇವಲ ಈಶ್ವರಪ್ಪ ಮಾತ್ರ ಆರೋಪಿಯಲ್ಲ. ಇಡೀ ಬಿಜೆಪಿ ಪಕ್ಷವೇ ಇದರಲ್ಲಿ ಭಾಗಿಯಾಗಿದೆ ಎಂದು ಆರೋಪಿಸಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ