Breaking News

ಇಬ್ಬರು ಐಪಿಎಸ್ ಅಧಿಕಾರಿಗಳು ಸೇರಿ ಐಎಂಎ ಹಗರಣದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕ್ರಮ: ಸಿಎಂ ಬೊಮ್ಮಾಯಿ

Spread the love

ಬೆಂಗಳೂರು: ಇಬ್ಬರು ಐಪಿಎಸ್ ಅಧಿಕಾರಿಗಳು ಸೇರಿದಂತೆ ಐಎಂಎ ಹಗರಣದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ.

ವಿಧಾನ ಪರಿಷತ್ ಕಲಾಪದಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ ಐಎಂಎ ಪ್ರಕರಣದ ಕುರಿತು ಪ್ರಶ್ನೆ ಮಾಡಿದರು.

ಐಎಂಎ ಪ್ರಕರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿಗಳ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ. ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರ್ಕಾರ ಯಾರನ್ನೂ ರಕ್ಷಣೆ ಮಾಡಬಾರದು ಅಂತ ಒತ್ತಾಯ ಮಾಡಿದರು.

ಇದಕ್ಕೆ ಉತ್ತರ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು, ಯಾರೇ ಪ್ರಕರಣದಲ್ಲಿ ಇದ್ದರೂ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಂಡಿದ್ದೇವೆ. ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮೇಲೆ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಕೆ ಆಗಿದೆ. ಪ್ರಾಸಿಕ್ಯೂಷನ್ ಗೂ ಅನುಮತಿ ನೀಡಲಾಗಿದೆ. ಅದರ ವಿರುದ್ಧ ಹೇಮಂತ್ ನಿಂಬಾಳ್ಕರ್ ಕೋರ್ಟ್‍ನಿಂದ ಸ್ಟೇ ತಂದಿದ್ದಾರೆ. ಸಿಬಿಐ ತನಿಖೆ ನಡೆಸುತ್ತಿದ್ದು ಸುಪ್ರಿಂ ಕೋರ್ಟ್‍ಗೆ ಹೋಗಿದೆ. ಅಲ್ಲಿಂದ ತೀರ್ಪು ಬಂದ ಮೇಲೆ ಕ್ರಮ ಕೈಗೊಳ್ಳುತ್ತೇವೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ