Breaking News

ಬಚ್ಚಲು ಬಾಯಿ ಈಶ್ವರಪ್ಪನವರನ್ನು ಸಚಿವ ಸ್ಥಾನದಿಂದ ರಾಜ್ಯಪಾಲರು, ಸಿಎಂ ವಜಾ ಮಾಡಬೇಕು: ಡಿ ಕೆ ಶಿವಕುಮಾರ್

Spread the love

ಬೆಂಗಳೂರು: ನಮಗೆ ಸಚಿವ ಈಶ್ವರಪ್ಪನವರ ರಾಜೀನಾಮೆ ಬೇಕಾಗಿಲ್ಲ, ರಾಜೀನಾಮೆ ಎನ್ನುವುದು ಬಹಳ ಗೌರವಯುತ ಪದ. ಲಾಲ್ ಬಹದ್ದೂರ್ ಶಾಸ್ತ್ರಿಯಂತವರು ಗೌರವಯುತವಾಗಿ ತಮ್ಮ ಹುದ್ದೆ ತ್ಯಾಗ ಮಾಡಿದವರು. ಬಚ್ಚಲು ಬಾಯಿ ಈಶ್ವರಪ್ಪನವರನ್ನು ರಾಜ್ಯಪಾಲರು, ಸಿಎಂ ಬೊಮ್ಮಾಯಿ ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಗ್ರಹಿಸುತ್ತಿದ್ದಾರೆ.

 

ರಾಷ್ಟ್ರಧ್ವಜ ಕುರಿತು ಹೇಳಿಕೆ ನೀಡಿ ದೇಶಕ್ಕೆ, ದೇಶದ ಘನತೆ-ಗೌರವದ ಸಂಕೇತವಾದ ರಾಷ್ಟ್ರಧ್ವಜಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪನವರು ಅವಮಾನ ಮಾಡಿದ್ದಾರೆ ಅವರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಹೋರಾಟ ತೀವ್ರವಾಗಿದೆ. ಕಾಂಗ್ರೆಸ್ ನಾಯಕರೆಲ್ಲ ವಿಧಾನಸೌಧದ ಒಳಗೆ ಅಹೋರಾತ್ರಿ ಧರಣಿ ನಡೆಸಿದ್ದಾರೆ.
ಇಂದು ಕೂಡ ಅವರ ಹೋರಾಟ ಮುಂದುವರಿಯುವ ಸಾಧ್ಯತೆಯಿದ್ದು, ವಿಧಾನಮಂಡಲ ಕಲಾಪದಲ್ಲಿ ಮತ್ತೆ ಗದ್ದಲ, ಕೋಲಾಹಲ ಮುಂದುವರಿಯುವ ಸಾಧ್ಯತೆ ಸಾಕಷ್ಟಿದೆ. ಕಲಾಪಕ್ಕೆ ಅಡ್ಡಿಯಾಗುವ ಎಲ್ಲಾ ಸಾಧ್ಯತೆಗಳಿವೆ.

ತಮ್ಮ ಹೋರಾಟವನ್ನು ಮುಂದುವರಿಸುವ ಕುರಿತು ಇಂದು ಬೆಳಗ್ಗೆ ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಡಿ ಕೆ ಶಿವಕುಮಾರ್, ನಮ್ಮ ಧರಣಿ ಮುಂದುವರಿಯುತ್ತದೆ. ನಾನು ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ಕೇಳುತ್ತಿಲ್ಲ. ಈಶ್ವರಪ್ಪ ರಾಜೀನಾಮೆ ನಮಗೆ ಬೇಕಾಗಿಲ್ಲ. ಸಿಎಂ, ಗವರ್ನರ್‌ ಈಶ್ವರಪ್ಪರನ್ನು ವಜಾ ಮಾಡಬೇಕು. ರಾಜೀನಾಮೆ ಎಂಬುದು ಬಹಳ ಗೌರವಯುತವಾದ ಪದ ಎಂದರು.


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ