Breaking News

ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್ ಪಟ್ಟು : ಪರಿಷತ್ ಕಲಾಪ ಸೋಮವಾರಕ್ಕೆ ಮುಂದೂಡಿಕೆ!

Spread the love

ಬೆಂಗಳೂರು : ಸಚಿವ ಕೆ ಎಸ್‌ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಸದಸ್ಯರು ವಿಧಾನ ಪರಿಷತ್​​ನಲ್ಲಿ ನಡೆಸುತ್ತಿರುವ ಹೋರಾಟಕ್ಕೆ ಶುಕ್ರವಾರದ ಕಲಾಪ ಬಲಿಯಾಯಿತು. ಕಾಂಗ್ರೆಸ್, ಬಿಜೆಪಿ ಸದಸ್ಯರ ವಾಗ್ವಾದ, ಆರೋಪ-ಪ್ರತ್ಯಾರೋಪಗಳ ಘೋಷಣೆ ಮೊಳಗಿ ಸದನದಲ್ಲಿ ಗದ್ದಲ, ಕೋಲಾಹಲ ಉಂಟಾಗಿದ್ದರಿಂದ ಕಲಾಪವನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಲಾಯಿತು.

ಬೆಳಗಿನ ಕಲಾಪ ಆರಂಭಗೊಳ್ಳುತ್ತಿದ್ದಂತೆ ಈಶ್ವರಪ್ಪ ವಿಷಯದ ಗದ್ದಲ ಆರಂಭಗೊಂಡಿದ್ದರಿಂದ ಕಲಾಪವನ್ನು 10 ನಿಮಿಷ ಮುಂದೂಡಲಾಯಿತು. ಮುಂದೂಡಿಕೆಯಾಗಿದ್ದ ಕಲಾಪ ಪುನಾರಂಭವಾಗುತ್ತಿದ್ದಂತೆ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ಮಾತನಾಡಿ, ಸರ್ಕಾರದಿಂದ ಕ್ರಮದ ಭರವಸೆ ಸಿಗುವವರೆಗೂ ಧರಣಿ ಬಿಡಲ್ಲ. ಈಶ್ವರಪ್ಪ ವಜಾ ಆಗಲೇಬೇಕು ಎಂದರು.

ಈ ವೇಳೆ ಮಾತನಾಡಿದ ಬಿಜೆಪಿ ಸದಸ್ಯ ನಾರಾಯಣಸ್ವಾಮಿ, ಪ್ರಧಾನಿ ಮೋದಿಗೆ ಧಿಕ್ಕಾರ ಹಾಕಿದ್ದು ಸಂವಿಧಾನ ವಿರೋಧಿ. ಸಲೀಂ ಅಹಮದ್ ಅವರನ್ನು ಸದನದಿಂದ ಹೊರ ಹಾಕಬೇಕು ಎಂದು ಆಗ್ರಹಿಸಿದರು


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ