Breaking News

ಅನೂಪ್ ಭಂಡಾರಿ ಜತೆ ಮತ್ತೊಂದು ಚಿತ್ರ : ಸರ್ಪೈಸ್ ಕೊಟ್ಟ ಸುದೀಪ್

Spread the love

ಶುಕ್ರವಾರ ಬೆಳ್ಳಂಬೆಳಗ್ಗೆ ಅಭಿಮಾನಿಗಳಿಗೆ ಶುಭ ಸುದ್ದಿ ಕೊಟ್ಟಿದ್ದಾರೆ ಕಿಚ್ಚ ಸುದೀಪ್. ವಿಕ್ರಾಂತ್ ರೋಣ ಸಿನಿಮಾದ ತ್ರಿಡಿ ವರ್ಷನ್ ನೋಡಿ ಮೆಚ್ಚಿಕೊಂಡಿದ್ದಲ್ಲದೇ, ಈ ಮೂಲಕ ಇಡೀ ಚಿತ್ರತಂಡಕ್ಕೆ ಧನ್ಯವಾದಗಳನ್ನು ಹೇಳಿದ್ದಾರೆ.ವಿಕ್ರಾಂತ್ ರೋಣ ತ್ರಿಡಿ ಅದ್ಭುತವಾಗಿ ಮೂಡಿ ಬಂದಿದೆ. ಈ ಸಿನಿಮಾದ ಬಿಡುಗಡೆಯ ದಿನಾಂಕಕ್ಕಾಗಿ ನಾನು ಕಾಯುತ್ತಿದ್ದೇನೆ. ಜತೆಗೆ ನಿರ್ದೇಶಕ ಅನೂಪ್ ಭಂಡಾರಿ ಅವರ ಜತೆಗಿನ ಮತ್ತೊಂದು ಸಿನಿಮಾ ಕುರಿತಾದ ಮಾಹಿತಿ ಹಂಚಿಕೊಳ್ಳಲು ಕಾತುರನಾಗಿದ್ದೇನೆ” ಎಂದು ಸುದೀಪ್ ಟ್ವಿಟ್ ಮಾಡಿದ್ದಾರೆ. 

ಅನೂಪ್ ಭಂಡಾರಿ ಮತ್ತು ಕಿಚ್ಚ ಸುದೀಪ್ ಕಾಂಬಿನೇಷನ್ ನ ‘ವಿಕ್ರಾಂತ್ ರೋಣ’ ಸಿನಿಮಾದ ಕೆಲಸ ಬಹುತೇಕ ಮುಗಿದಿದೆ. ಅಂದುಕೊಂಡಂತೆ ಆಗಿದ್ದರೆ ಇಷ್ಟೊತ್ತಿಗೆ ಸಿನಿಮಾ ಬಿಡುಗಡೆ ಆಗಬೇಕಿತ್ತು. ಕೋವಿಡ್ ಮತ್ತು ಸರಕಾರದ ಕೆಲ ನಿಯಮಗಳಿಂದಾಗಿ ಬಿಡುಗಡೆ ಎರಡೆರಡು ಬಾರಿ ಬಿಡುಗಡೆಯ ದಿನಾಂಕವನ್ನು ಮುಂದೂಡಿದ್ದಾರೆ. ಈ ಬಾರಿ ಪಕ್ಕಾ ದಿನಾಂಕವನ್ನು ಗೊತ್ತು ಮಾಡಿಕೊಂಡು ಅಖಾಡಕ್ಕೆ ಇಳಿಯಲಿದೆಯಂತೆ ಚಿತ್ರತಂಡ.


Spread the love

About Laxminews 24x7

Check Also

ಮತ್ತೆ ಪಾಚಿಕಟ್ಟಿದ ಸುವರ್ಣ ಸೌಧ:

Spread the loveಬೆಳಗಾವಿ: ಉತ್ತರ ಕರ್ನಾಟಕದ ಶಕ್ತಿ ಕೇಂದ್ರ ಬೆಳಗಾವಿಯ ಸುವರ್ಣ ವಿಧಾನಸೌಧ ಮತ್ತೆ ಪಾಚಿಕಟ್ಟಿದೆ. ಸ್ವಚ್ಛತೆಗೆ ಅನುದಾನ ಕೊರತೆ ಎದುರಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ