ಬೆಂಗಳೂರು: ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುವಂತೆ ರಾಜ್ಯದ ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಇಲಾಖೆ ಕಾರ್ಯದರ್ಶಿಗಳು ಹೊರಡಿಸಿರುವ ಸುತ್ತೋಲೆಯನ್ನು ಸರ್ಕಾರ ಹಿಂಪಡೆಯಬೇಕು ಎಂದು ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಹಾಗೆಯೇ, ಹೆಣ್ಣು ಮಕ್ಕಳ ಶಿಕ್ಷಣದ ವಿಚಾರದಲ್ಲಿ ಬಿಜೆಪಿಯ ನಿಲುವು ಏನು ಎಂಬುದನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ ತಿಳಿಸಬೇಕು ಎಂದು ಕೇಳಿದ್ದಾರೆ.
ಸುತ್ತೋಲೆಗೆ ಸಂಬಂಧಿಸಿದಂತೆ #HijabCircular ಟ್ಯಾಗ್ ಬಳಸಿ ಸರಣಿ ಟ್ವೀಟ್‌ಗಳನ್ನು ಮಾಡಿರುವ ಸಿದ್ದರಾಮಯ್ಯ, ‘ರಾಜ್ಯದ ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಇಲಾಖೆ ಕಾರ್ಯದರ್ಶಿಗಳು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುವಂತೆ ಹೊರಡಿಸಿರುವ ಸುತ್ತೋಲೆಯನ್ನು ಕೂಡಲೇ ಹಿಂಪಡೆದು, ನ್ಯಾಯಾಲಯದ ಆದೇಶ ಪಾಲನೆ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ’ ಎಂದು ಆಗ್ರಹಿಸಿದ್ದಾರೆ.