Home / ರಾಜಕೀಯ / ಕಲಾತಪಸ್ವಿ ರಾಜೇಶ್’ ಇಂದು ಮುಂಜಾನೆ ಮೃತಪಟ್ಟಿದ್ದಾರೆ.

ಕಲಾತಪಸ್ವಿ ರಾಜೇಶ್’ ಇಂದು ಮುಂಜಾನೆ ಮೃತಪಟ್ಟಿದ್ದಾರೆ.

Spread the love

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ನಟ, ಕಲಾತಪಸ್ವಿ ರಾಜೇಶ್(89) ವಿಧಿವಶರಾಗಿದ್ದಾರೆ.

ಕಿಡ್ನಿ ವೈಫಲ್ಯ, ತೀವ್ರ ಉಸಿರಾಟ ಸಮಸ್ಯೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ರಾಜೇಶ್‌ ಇಂದು ಮುಂಜಾನೆ ಮೃತಪಟ್ಟಿದ್ದಾರೆ.

ಕೆಲ ದಿನಗಳಿಂದ ರಾಜೇಶ್‌ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. 150ಕ್ಕೂ ಹೆಚ್ಚು ಚಿತ್ರಗಳಲ್ಲಿ ರಾಜೇಶ್ ಅಭಿನಯಿಸಿದ್ದಾರೆ. ವಿದ್ಯಾರಣ್ಯಪುರದಲ್ಲಿರುವ ನಿವಾಸದಲ್ಲಿ ಇಂದು ಸಂಜೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ʼಕಲಾತಪಸ್ವಿ ರಾಜೇಶ್’ ಎಂಬುದು ಅವರ ಆತ್ಮಚರಿತ್ರೆಯ ಹೆಸರು. ತಮಿಳು ಚಿತ್ರರಂಗದಿಂದ ಅಂದಿನ ದಿನಗಳಲ್ಲಿ ಅವಕಾಶ ಬಂದಿದ್ದರೂ ಕನ್ನಡದ ನೆಲದಲ್ಲೇ ಏನನ್ನಾದರೂ ಸಾಧಿಸಬೇಕೆಂಬ ಪ್ರಬಲ ಕನಸು ಹೊಂದಿದ್ದ ರಾಜೇಶ್ ಅಂತಹ ಕರೆಗಳನ್ನು ನಯವಾಗಿ ನಿರಾಕರಿಸಿದ್ದರು.

ಸೊಸೆ ತಂದ ಸೌಭಾಗ್ಯ, ನಮ್ಮ ಊರು, ಗಂಗೆ ಗೌರಿ, ಬೆಳುವಲದ ಮಡಿಲಲ್ಲಿ, ಕಪ್ಪು ಬಿಳುಪು, ಬೃಂದಾವನ, ಬೋರೆ ಗೌಡ ಬೆಂಗಳೂರಿಗೆ ಬಂದ, ಮರೆಯದ ದೀಪಾವಳಿ, ಪ್ರತಿಧ್ವನಿ, ಕಾವೇರಿ, ದೇವರ ಗುಡಿ, ಬದುಕು ಬಂಗಾರವಾಯ್ತು, ಸೊಸೆ ತಂದ ಸೌಭಾಗ್ಯ, ಮುಗಿಯದ ಕಥೆ, ಬಿಡುಗಡೆ, ದೇವರದುಡ್ಡು, ಕಲಿಯುಗ, ಪಿತಾಮಹ ಮುಂತಾದ ಚಿತ್ರಗಳಲ್ಲಿ ರಾಜೇಶ್‌ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದರು.

 


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ