Breaking News

ಏಷ್ಯಾದ ಅತೀ ದೊಡ್ಡ ಬಯೋ-ಸಿಎನ್‍ಜಿ ಸ್ಥಾವರ ಉದ್ಘಾಟಿಸಿದ ಮೋದಿ

Spread the love

ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ಶನಿವಾರ ಮಧ್ಯಪ್ರದೇಶದ ಇಂದೋರ್‍ನಲ್ಲಿ ಪುರಸಭೆಯ ಘನ ತ್ಯಾಜ್ಯ ಆಧಾರಿತ ಗೋಬರ್-ಧನ್(ಬಯೋ-ಸಿಎನ್‍ಜಿ) ಸ್ಥಾವರವನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದ್ದಾರೆ.

ಇಂದೋರ್‍ನ ಪುರಸಭೆಯ ಘನತ್ಯಾಜ್ಯ ಆಧಾರಿತ ಗೋಬರ್-ಧನ್ ಸ್ಥಾವರವನ್ನು ಉದ್ಘಾಟಿಸಿದ ಮೋದಿ ದೇಶದ 75 ದೊಡ್ಡ ನಾಗರಿಕ ಸಂಸ್ಥೆಗಳಲ್ಲಿ ಗೋಬರ್-ಧನ್ ಸ್ಥಾವರದಂತಹ ಜೈವಿಕ-ಸಿಎನ್‍ಜಿ ಸ್ಥಾವರಗಳನ್ನು ನಿರ್ಮಿಸುವ ಕೆಲಸ ನಡೆಯುತ್ತಿದೆ ಎಂಬುದು ನನಗೆ ಸಂತೋಷವಾಗಿದೆ. ಮುಂದಿನ 2 ವರ್ಷಗಳಲ್ಲಿ ಈ ಉಪಕ್ರಮದಿಂದ ದೇಶದ ನಗರಗಳನ್ನು ಸ್ವಚ್ಛ, ಮಾಲಿನ್ಯ ಮುಕ್ತಗೊಳಿಸಲು ಹಾಗೂ ಅವುಗಳನ್ನು ಶುದ್ಧ ಶಕ್ತಿಯತ್ತ ಕೊಂಡೊಯ್ಯಲು ಸಹಾಯ ಮಾಡುತ್ತದೆ ಎಂದು ಹೇಳಿದರು.

ಕಠಿಣ ಹವಾಮಾನ ಪರಿಸ್ಥಿತಿ ಹಾಗೂ ಕೋವಿಡ್-19 ಸಾಂಕ್ರಾಮಿಕದ ಹೊರತಾಗಿಯೂ ರಾಷ್ಟ್ರದ ಸೇವೆಯನ್ನು ಮುಂದುವರಿಸುತ್ತಿರುವ ನೈರ್ಮಲ್ಯ ಕಾರ್ಯಕರ್ತರಿಗೆ ನಾನು ಕೃತಜ್ಞನಾಗಿದ್ದೇನೆ. ಸ್ವಚ್ಛ ಭಾರತ್ ಮಿಷನ್ ಕಡೆಗೆ ನಿಮ್ಮ ಬದ್ಧತೆ ಹಾಗೂ ಸಮರ್ಪಣೆಗೆ ನಾವು ಎಂದೆಂದಿಗೂ ಋಣಿಯಾಗಿದ್ದೇವೆ ಎಂದು ನೈರ್ಮಲ್ಯ ಕಾರ್ಮಿಕರಿಗೆ ಕೃತಜ್ಞತೆ ಸಲ್ಲಿಸಿದರು. 


Spread the love

About Laxminews 24x7

Check Also

ಉಡುಪಿ: ಸೆಪ್ಟೆಂಬರ್ 7ರಂದು ಖಗ್ರಾಸ ಚಂದ್ರಗ್ರಹಣ; ಕೆಂಬಣ್ಣದ ಚಂದಿರನ ದರ್ಶನ

Spread the love ಉಡುಪಿ: ಸೆ.7ರ ಹುಣ್ಣಿಮೆಯ ರಾತ್ರಿ ಖಗ್ರಾಸ ಚಂದ್ರಗ್ರಹಣ ಸಂಭವಿಸಲಿದೆ. ಖಗ್ರಾಸ ಚಂದ್ರ ಗ್ರಹಣದ ವೇಳೆ, ಚಂದ್ರನು ತಾಮ್ರದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ