ಯಾದಗಿರಿ: ತ್ರಿವಳಿ ಮಕ್ಕಳ ಜನನದಿಂದಾಗಿ ಚಿಂತೆಗೀಡಾಗಿದ್ದ, ಯಾದಗಿರಿ ತಾಲೂಕಿನ ರಾಮಸಮುದ್ರ ಗ್ರಾಮದ ಪದ್ಮಾ ಕುಟುಂಬಕ್ಕೆ ನಟ ಸೋನು ಸೂದ್ ಕೊಟ್ಟ ಮಾತಿನಂತೆ ಸಹಾಯವನ್ನು ಮಾಡಿದ್ದಾರೆ.
ಈ ತಿಂಗಳ 22ರಂದು ಪದ್ಮಾ ದಂಪತಿಗೆ ಏಕಕಾಲದಲ್ಲಿ ಮೂರು ಗಂಡು ಮಕ್ಕಳು ಜನಿಸಿದ್ದವು. ಕಡು ಬಡತನದಲ್ಲಿದ್ದ ಈ ಕುಟುಂಬ ಸಹಾಯ ಹಸ್ತವನ್ನು ಚಾಚಿದ್ದರು, ಈ ಸುದ್ದಿಯನ್ನು ಯಾದಗಿರಿಯ ಮಲ್ಲಿಕಾರ್ಜುನ ರೆಡ್ಡಿಯವರು ನಟ ಸೋನು ಸೂದ್‍ಗೆ ಕಳುಹಿಸಿದ್ದರು.
ಸುದ್ದಿ ನೋಡಿದ ಸೋನು ಸೂದ್ ಪದ್ಮಾ ಕುಟುಂಬಕ್ಕೆ ರೇಷನ್ ನೀಡುವ ಭರವಸೆ ನೀಡಿದ್ದರು. ಭರವಸೆ ನೀಡಿದ ಎರಡೇ ದಿನಕ್ಕೆ ಮುಂಬೈಯಿಂದ ದಿನಸಿ ಕಳುಹಿಸಿದ್ದಾರೆ.ಎರಡು ತಿಂಗಳಿಗಾಗುವಷ್ಟು ಅಡುಗೆ ಎಣ್ಣೆ, ಅಕ್ಕಿ, ಸಕ್ಕರೆ, ಬೆಳೆಯನ್ನು ಅಮೆಜಾನ್ ಮೂಲಕ ಮೂರು ಬಾಕ್ಸ್‍ಗಳಲ್ಲಿ ಪಾರ್ಸಲ್ ಮಾಡಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿಗೆ ವಿಡಿಯೋ ಕಳುಹಿಸಿರುವ ಸೋನು ಸೂದ್, ಮುಂದಿನ ದಿನಗಳಲ್ಲಿ ವೈದ್ಯಕೀಯ ಸಹಾಯ ನೀಡುವ ಮತ್ತು ಮಕ್ಕಳಿಗೆ ಬಟ್ಟೆ ಕಳುಹಿಸಲು ಭರವಸೆ ನೀಡಿದ್ದಾರೆ. ಮಕ್ಕಳ ತಂದೆ ನಾಗರಾಜ್ ನಟನಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??