Breaking News

ಇಂದು ಕೂಡ ಮುಂದುವರಿಯಲಿದೆ ಕಾಂಗ್ರೆಸ್‌ ನ ಅಹೋರಾತ್ರಿ ಧರಣಿ: ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

Spread the love

ಸಚಿವ ಕೆ.ಎಸ್.‌ ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧದಲ್ಲಿ ಕಾಂಗ್ರೆಸ್‌ ನಾಯಕರ ಅಹೋರಾತ್ರಿ ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದೆ. ಗುರುವಾರದಿಂದ ಪ್ರಾರಂಭವಾದ ಈ ಧರಣಿ ಇಂದು ಕೂಡ ಮುಂದುವರಿಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

 

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಸೋಮವಾರ ರಾಜ್ಯಾದ್ಯಂತ ಎಲ್ಲಾ ತಾಲೂಕುಗಳಲ್ಲಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ ಎಂದರು.

ಕಾಂಗ್ರೆಸ್‌ ನ ಧರಣಿ ನಿರತರಿಗೆ ಊಟದ ವ್ಯವಸ್ಥೆ ಮಾಡಲಾಗಿದ್ದು, ಇಂದು ಬೆಳಗ್ಗೆಯೂ ಅಲ್ಲೇ ಉಪಹಾರ ನೀಡಲಾಗಿದೆ. ಹಲವರು ಮನೆಗೆ ತೆರಳಿ ಮತ್ತೆ ವಾಪಾಸ್‌ ಆಗಲು ತೀರ್ಮಾನಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ