Breaking News

ಸಚಿವ ಈಶ್ವರಪ್ಪ ವಜಾಕ್ಕೆ ಪಟ್ಟು; ಮುಂದುವರಿದ ‘ಕೈ’ ಅಹೋರಾತ್ರಿ ಧರಣಿ

Spread the love

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ವಿಧಾನಮಂಡಲದ ಉಭಯ ಸದನಗಳಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಕಾಂಗ್ರೆಸ್‌, ಪಟ್ಟು ಸಡಿಲಿಸದಿರಲು ನಿರ್ಧರಿಸಿದೆ. ಅಲ್ಲದೆ, ತಾಲ್ಲೂಕು ಕೇಂದ್ರಗಳಲ್ಲಿ ಸೋಮವಾರ (ಫೆ.

21) ಪ್ರತಿಭಟನೆ ನಡೆಸುವಂತೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದೆ.

ಕಾಂಗ್ರೆಸ್‌ ಹಟ ಹಿಡಿದಿರುವುದರಿಂದ ಸೋಮವಾರವು ವಿಧಾನ ಮಂಡಲದ ಉಭಯ ಸದನಗಳಲ್ಲಿ ಗದ್ದಲ ಮುಂದುವರಿಯುವ ಸಾಧ್ಯತೆ ಇದೆ. ಈ ಮಧ್ಯೆಯೇ ಮಸೂದೆಗಳಿಗೆ ಅಂಗೀಕಾರ ಪಡೆದು ಸೋಮವಾರವೇ ಅಧಿವೇಶನ ಮುಕ್ತಾಯಗೊಳಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ.

ಧರಣಿ ನಿರತ ಕಾಂಗ್ರೆಸ್‌ ಶಾಸಕರು, ಶನಿವಾರವು ಸಚಿವ ಈಶ್ವರಪ್ಪ ಮತ್ತು ರಾಜ್ಯ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದರು. ‘ಈಶ್ವರಪ್ಪ ಅವರನ್ನು ವಜಾಗೊಳಿಸುವರೆಗೆ ಯಾವುದೇ ಕಾರಣಕ್ಕೂ ಕಲಾಪ ನಡೆಯಲು ಅವಕಾಶ ನೀಡುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ