ರಾಯಚೂರು: ನಗರದ ಗದ್ವಾಲ್ ರಸ್ತೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ದಂಧೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಯಚೂರು ತಾಲೂಕಿನ ಚಂದ್ರಬಂಡಾ ಗ್ರಾಮದ ವೀರೇಶ್ ಹಾಗೂ ತಿಮ್ಮಾಪುರಪೇಟೆಯ ಈರಣ್ಣ ಬಂಧಿತ ಆರೋಪಿಗಳು.
ಬಡವರಿಗೆ ಸೇರಬೇಗಿದ್ದ ಅಕ್ಕಿಯ ಚೀಲವನ್ನು ಆರೋಪಿಗಳು ಬದಲಿಸಿ ಸಾಗಾಟ ಮಾಡುತ್ತಿದ್ದರು. ಮಾಹಿತಿ ತಿಳಿದ ಮಾರ್ಕೆಟ್ ಯಾರ್ಡ್ ಪೊಲೀಸರು ದಾಳಿ ನಡೆಸಿ ಪಡಿತರ ಅಕ್ಕಿ ಸಮೇತ ವಾಹನ ಜಪ್ತಿ ಮಾಡಿದ್ದಾರೆ. ಪೊಲೀಸರು ತಪಾಸಣೆ ನಡೆಸಿದಾಗಿ 17 ಕ್ವಿಂಟಾಲ್ ಅಕ್ಕಿ ಪತ್ತೆಯಾಗಿದ್ದು, ವಾಹನವನ್ನು ವಶಪಡಿಸಿಕೊಂಡಿದ್ದಾರೆ