Breaking News

ಶಾಸಕ ಜಮೀರ್ ಅಹ್ಮದ್ ವಿರುದ್ಧ ಭೂಕಬಳಿಕೆ ಆರೋಪ; ಎಫ್​ಐಆರ್​​ ದಾಖಲು

Spread the love

ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್​ಗೆ (Zameer Ahmed Khan) ಸಂಕಷ್ಟ ಎದುರಾಗಿದೆ. ಜಮೀರ್ ಹಾಗೂ ಕುಟುಂಬಸ್ಥರ ವಿರುದ್ಧ ಭೂಕಬಳಿಕೆ ಆರೋಪ ಎದುರಾಗಿದ್ದು, ಬೆಂಗಳೂರಿನ ಸಂಪಿಗೇಹಳ್ಳಿ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ನ್ಯಾಯಾಲಯದ ಆದೇಶದ ಮೇರೆಗೆ ಜಮೀರ್ ಅಹ್ಮದ್ ಹಾಗೂ ಸಹೋದರರ ವಿರುದ್ಧ ಎಫ್​ಐಆರ್ (FIR) ದಾಖಲು ಮಾಡಲಾಗಿದೆ. ಜಮೀರ್ ಕುಟುಂಬದ ವಿರುದ್ಧ ಶಾಹೀತಾ ನಾಸೀನ್, ತಸ್ನೀಮ್ ಫಾತೀಮಾ ಎಂಬುವವರು ನಿವೇಶನ ಕಬಳಿಕೆ ಯತ್ನ ಆರೋಪದಡಿ ಕೋರ್ಟ್​ಗೆ ಖಾಸಗಿ ದೂರು ನೀಡಿದ್ದರು. ಈ ಸಂಬಂಧ ಕೋರ್ಟ್​ ಆದೇಶದಂತೆ ಜಮೀಲ್ ಅಹ್ಮದ್ (Zameel Ahmed), ಜಮೀರ್ ಅಹ್ಮದ್, ಅತೀಕ್ ಕಾವರ್, ನ್ಯಾಷನಲ್ ಟ್ರಾವೆಲ್ಸ್ (National Travels), ಇತರರ ವಿರುದ್ಧ ಎಫ್​ಐಆರ್ ದಾಖಲು ಮಾಡಲಾಗಿದೆ.

ಪ್ರಕರಣವೇನು?

2015 ರಲ್ಲಿ ಶಾಹೀತಾ ನಾಸೀನ್, ತಸೀಮಾ ಫಾತೀಮಾ ಜಮೀರ್ ಕುಟುಂಬಸ್ಥರಿಂದ ಚೊಕ್ಕನಹಳ್ಳಿ ಬಡಾವಣೆಯಲ್ಲಿ ಸೈಟ್ ಖರೀದಿಸಿದ್ದಾರೆಂದು ಉಲ್ಲೇಖಿಸಲಾಗಿದೆ. ಚಾಮರಾಜಪೇಟೆ ಶಾಸಕ ಜಮೀರ್ ಸಹೋದರ ಹಾಗೂ ಕುಟುಂಬಸ್ಥರೇ ಅದನ್ನು ಮಾರಾಟ ಮಾಡಿದ್ದರು. 2018 ರಲ್ಲಿ ಜಮೀರ್ ಕುಟುಂಬಸ್ಥರಿಂದ ಮತ್ತೊಂದು ಸೈಟ್ ಖರೀದಿಸಿದ್ದಾಗಿ ಶಾಹೀತಾ ನಾಸೀನ್ ಉಲ್ಲೇಖಿಸಿದ್ದಾರೆ. ಜೆಸಿ ನಗರ ನಿವಾಸಿಗಳಾಗಿದ್ದ ಶಾಹೀತಾ ನಾಸೀನ್ ಸೈಟ್​ಗಳ ಕಡೆ ಗಮನ ಹರಿಸಿರಲಿಲ್ಲ. ಈ ಮಧ್ಯೆ ಮಾರಾಟ ಮಾಡಿದ್ದ ಜಮೀರ್ ಕುಟುಂಬದಿಂದಲೇ ಸೈಟ್​ಗಳ ಕಬಳಿಕೆ ಯತ್ನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಹಾಗೆಯೇ ಕಬಳಿಕೆ ಪ್ರಶ್ನಿಸಿದ್ದ ಶಾಹೀತಾ ನಾಸೀನ್ ಕುಟುಂಬಕ್ಕೆ ಜೀವಬೆದರಿಕೆ ಹಾಕಲಾಗಿದೆ ಎಂದೂ ಆರೋಪಿಸಲಾಗಿದೆ.

ಜಮೀರ್ ಕುಟುಂಬದ ವಿರುದ್ಧ ಆರೋಪಿಸಿ ಸೈಟ್ ಮಾಲಿಕರು ಕಳೆದ ವರ್ಷ ಕೋರ್ಟ್ ಮೊರೆಹೋಗಿದ್ದರು. ಖಾಸಗಿ ದೂರು ವಿಚಾರಣೆ ನಡೆಸಿದ ಕೋರ್ಟ್, ತನಿಖೆ ನಡೆಸುವಂತೆ ಆದೇಶ ನೀಡಿತ್ತು. ಜತೆಗೆ ಕಬಳಿಕೆ ಮಾಡಿರುವ ಸೈಟ್ ಸಂಬಂಧ ಯಥಾಸ್ಥಿತಿ ಕಾಪಾಡಲು ಆದೇಶ ನೀಡಿತ್ತು. ಕೋರ್ಟ್ ನಿಂದ ತಡೆಯಾಜ್ಞೆ ತಂದರೂ, ಸೈಟ್ ಬಿಟ್ಟು ಕೊಟ್ಟಿಲ್ಲ ಎಂದು ಆರೋಪಿಸಲಾಗಿದೆ.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ