ಲಕ್ನೋ: ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗಾಗಿ ಶ್ರೀ ಕಾಶಿ ವಿಶ್ವನಾಥ ದೇವಸ್ಥಾನ ಟ್ರಸ್ಟ್ ನಿಂದ ಹೊಸ ಅಪ್ಲಿಕೇಶನ್ ಬಿಡುಗಡೆ ಮಾಡಲಾಗಿದೆ.
ಮಹಾ ಶಿವರಾತ್ರಿಯ ಸಂದರ್ಭದಲ್ಲಿ ಕಾಶಿ ವಿಶ್ವನಾಥನ ದರ್ಶನ ಪಡೆಯಲು ಹಲವು ಭಕ್ತಾದಿಗಳು ತುಂಬಾ ದಿನದಿಂದ ಕಾಯುತ್ತಿರುತ್ತಾರೆ. ಭಕ್ತರಿಗಾಗಿ ದೇವಸ್ಥಾನ ಟ್ರಸ್ಟ್ ಒಂದು ಹೊಸ ಅಪ್ಲಿಕೇಶನ್ ಬಿಟ್ಟಿದೆ. ಈ ಅಪ್ಲಿಕೇಶನ್ ನಲ್ಲಿ ಭಕ್ತರು ನೋಂದಾಯಿಸಿಕೊಳ್ಳುವ ಮೂಲಕ ದರ್ಶನವನ್ನು ಪಡೆಯಬಹುದು. ಈ ಆ್ಯಪ್ ಮೂಲಕ ಯಾವ ವೇಳೆ ಕಾಶಿ ದರ್ಶನ ಪಡೆಯಬೇಕು ಎಂಬುದನ್ನು ತಿಳಿದುಕೊಳ್ಳಬಹುದು. ಆ್ಯಪ್ ನಲ್ಲಿ ದರ್ಶನಕ್ಕೆ ಸರಿಯಾದ ಮಾರ್ಗ ಮತ್ತು ಸಮಯದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತೆ. ಆ್ಯಪ್‍ನಲ್ಲಿ ಭಕ್ತರು ನೋಂದಾಯಿಸಿಕೊಂಡರೆ ದೇವಾಲಯದ ಆಡಳಿತವು ಅವರಿಗೆ ಒಂದು ನಿರ್ದಿಷ್ಟ ಸಮಯ ಕೊಟ್ಟು ದೇವರ ದರ್ಶನ ಪಡೆಯುವಂತೆ ಸೂಚಿಸುತ್ತೆ. ಈ ಮೂಲಕ ದೇವಾಲಯದ ಆಡಳಿತ ಮಂಡಳಿಯು ಜನಸಂದಣಿಯನ್ನು ಸರಿಯಾಗಿ ನಿರ್ವಹಿಸಲು ಸಹಾಯ ಮಾಡುತ್ತದೆ.