ರಾಮನಗರ, ಫೆಬ್ರವರಿ 21: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಪಕ್ಷಾಂತರ ಪರ್ವ ಆರಂಭಗೊಂಡಿದೆ. ಚುನಾವಣೆಗೆ ವರ್ಷ ಇರುವಾಗಲೇ ಪಕ್ಷಾಂತರ ಜಿಗಿತ ಬಲು ಜೋರಾಗಿದೆ. ತೆನೆ ಇಳಿಸಿ ನೂರಾರು ಮುಖಂಡರು ಕಮಲ ಹಿಡಿಯುತ್ತಿದ್ದಾರೆ. ಇಷ್ಟಾದರೂ ದಳಪತಿ ಎಚ್‌ಡಿಕೆ ಮಾತ್ರ ಕೂಲ್ ಆಗಿದ್ದಾರೆ.
ರೇಷ್ಮೆ ನಗರಿ ರಾಮನಗರ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ತನ್ನದೇ ಆದ ನೆಲೆ ಉಳಿಸಿಕೊಂಡಿದೆ. ರಾಮನಗರ, ಚನ್ನಪಟ್ಟಣ ಹಾಗೂ ಮಾಗಡಿ ತಾಲೂಕಿನಲ್ಲಿ ಜೆಡಿಎಸ್ ಜೆಡಿಎಸ್ ಶಾಸಕರಿದ್ದಾರೆ. ಬೊಂಬೆನಗರಿ ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಶಾಸಕರಾಗಿದ್ದಾರೆ. ಇದೀಗ ಚನ್ನಪಟ್ಟಣ ಕ್ಷೇತ್ರದಿಂದ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಮಾಜಿ ಸಚಿವ, ಹಾಲಿ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ನೇತೃತ್ವದಲ್ಲಿ ಬಿಜೆಪಿ ಪಕ್ಷ ಸೇರುತ್ತಿದ್ದಾರೆ.