Breaking News

ಈಶ್ವರಪ್ಪ ರಾಜೀನಾಮೆಗೆ ಪಟ್ಟು : 5ನೇ ದಿನವೂ ಸದನದಲ್ಲಿ ಕೈ ನಾಯಕರ ಅಹೋರಾತ್ರಿ ಧರಣಿ

Spread the love

ಬೆಂಗಳೂರು: ಭವಿಷ್ಯದಲ್ಲಿ ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಾಡಬಹುದು ಎಂಬುದಾಗಿ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ, ರಾಷ್ಟ್ರಧ್ವಜಕ್ಕೆ ( National Flag) ಅವಮಾನ ಮಾಡಿದಂತ ಸಚಿವ ಈಶ್ವರಪ್ಪ ( Minister K S Eshwarappa) ಅವರನ್ನು ಸಂಪುಟದಿಂದ ಕೈ ಬಿಡುವಂತೆ ಒತ್ತಾಯಿಸಿ, ಕಾಂಗ್ರೆಸ್‌ ನಾಯಕರ ಅಹೋರಾತ್ರಿ ಧರಣಿ ಮುಂದುವರೆಸಿದ್ದಾರೆ.

 

ರಾಷ್ಟ್ರಧ್ವಜ ಕುರಿತು ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಿಂದ ಅಹೋರಾತ್ರಿ ಧರಣಿ ಮುಂದುವರೆಯುತ್ತಿದೆ.

ಸಚಿವ ಕೆ ಎಸ್‌ ಈಶ್ವರಪ್ಪರನ್ನು ವಜಾಗೊಳಿಸಲು ಕಳೆದ ಗುರುವಾರದಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಕಾಂಗ್ರೆಸ್ ಶಾಸಕರ ಹೋರಾಟ 5ನೇ ದಿನಕ್ಕೂ ಕಾಲಿಟ್ಟಿದೆ.

ಇದಕ್ಕೆ ಉತ್ತರ ಸಿಗುವವರೆಗೂ ಪ್ರತಿಭಟನೆ ಮುಂದುವರಿಸಲಿದೆ ಎಂದು ಕಾಂಗ್ರೆಸ್‌ ನಾಯಕರು ಪಟ್ಟುಹಿಡಿದಿದ್ದಾರೆ.


Spread the love

About Laxminews 24x7

Check Also

ಹಸಿದ ಹೊಟ್ಟೆಗೆ ಆಸರೆ: ಮುನವಳ್ಳಿಯಲ್ಲಿ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ!

Spread the love​”ಬಡವರ ಮತ್ತು ಶ್ರಮಿಕ ವರ್ಗದ ಜನರ ಹಸಿವು ನೀಗಿಸುವ ಉದ್ದೇಶದಿಂದ, ಇಂದು ಮುನವಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ