Breaking News

ಕೊಪ್ಪಳ ಜಿಲ್ಲೆಯ ಅಂಜನಾದ್ರಿಯೇ ಹನುಮ ಹುಟ್ಟಿದ ಸ್ಥಳ. ಶೀಘ್ರವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕೃತ ಘೋಷಣೆ ಮಾಡಲಿದ್ದಾರೆ: ಜೊಲ್ಲೆ

Spread the love

ಹೊಸಪೇಟೆ: ಕೊಪ್ಪಳ ಜಿಲ್ಲೆಯ ಅಂಜನಾದ್ರಿಯೇ ಹನುಮ ಹುಟ್ಟಿದ ಸ್ಥಳ. ಶೀಘ್ರವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕೃತ ಘೋಷಣೆ ಮಾಡಲಿದ್ದಾರೆ ಎಂದು ಮುಜರಾಯಿ ಮತ್ತು ವಕ್ಫ್ ಸಚಿವೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಮುಜರಾಯಿ ಇಲಾಖೆಯಿಂದ ದಾಖಲೆ, ಪುರಾವೆ ಸಂಗ್ರಹಿಸಲಾಗುತ್ತಿದೆ.

ರಾಮಾಯಣದಲ್ಲಿ ಇಲ್ಲಿನ ಕಿಷ್ಕಿಂಧೆ ಬಗ್ಗೆ ಉಲ್ಲೇಖವಿದೆ. ಆದರೆ, ತಿರುಪತಿಯಲ್ಲಿ ಹನುಮನ ಜನ್ಮಸ್ಥಳವಿದೆ ಎನ್ನಲು ಐತಿಹಾಸಿಕ ಪುರಾವಿಯಿಲ್ಲ ಎಂದು ಭಾನುವಾರ ನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಅಯೋಧ್ಯೆಯ ಶ್ರೀರಾಮ ಮಂದಿರ ಮಾದರಿಯಲ್ಲಿ ಅಂಜನಾದ್ರಿ ಬೆಟ್ಟ ಅಭಿವೃದ್ಧಿ ಮಾಡಲಾಗುವುದು. ಬಜೆಟ್‌ನಲ್ಲಿ ಈ ಬಗ್ಗೆ ಹೆಚ್ಚಿನ ಹಣ ಮೀಸಲಿರಿಸಲು ಪ್ರಯತ್ನ ನಡೆದಿದೆ. ಅಂಜನಾದ್ರಿ ಅಭಿವೃದ್ಧಿ ಕುರಿತು ಕೊಪ್ಪಳ ಡಿಸಿಯಿಂದ ಪ್ರಪೋಸಲ್ ಪಡೆಯಲಾಗಿದೆ. ಕೊಪ್ಪಳ ಉಸ್ತುವಾರಿ ಸಚಿವ ಆನಂದ ಸಿಂಗ್ ಆಗಿದ್ದರಿಂದ ಅಭಿವೃದ್ಧಿ ಪಕ್ಕಾ ಆಗಲಿದೆ ಎಂದರು.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ