ಹುಬ್ಬಳ್ಳಿ: ನೀರಿನ ವಿಷಯಕ್ಕೆ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಮತ್ತು ಪಕ್ಕದ ಮನೆಯವರ ಜೊತೆ ಮಾರಾಮಾರಿ ನಡೆದಿದ್ದು, ಎರಡು ಕುಟುಂಬಗಳು ಪರಸ್ಪರ ಮಾರಾಣಾಂತಿಕವಾಗಿ ಹಲ್ಲೆ ಮಾಡಿಕೊಂಡಿದ್ದಾರೆ.
ಹಳೇ ಹುಬ್ಬಳ್ಳಿಯ ಸಹದೇವನಗರದಲ್ಲಿ ಈ ಘಟನೆ ನಡೆದಿದೆ. ಹುಬ್ಬಳ್ಳಿಯ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪುರಾಣಿಕಮಠ್ ಹೆಡ್ ಕಾನ್ಸ್‍ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪುರಾಣಿಕಮಠ್ ಅವರ ಮನೆಯ ಪಕ್ಕದಲ್ಲಿರುವ ಭರತೇಶ್ ಅವರ ಜೊತೆಗೆ ಕುಡಿಯುವ ನೀರಿನ ಸಲುವಾಗಿ ಜಗಳ ಆರಂಭವಾಗಿದೆ. ಜಗಳ ತಾರಕ್ಕೇರಿ ಇಬ್ಬರು ಇಟ್ಟಿಗೆ ಮತ್ತು ಕಬ್ಬಿಣದ ರಾಡ್ ನಿಂದ ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ಪುರಾಣಿಕಮಠ್ ಮತ್ತು ಭರತೇಶ್ ಇಬ್ಬರಿಗೂ ಗಂಭೀರ ಗಾಯಗಳಾಗಿವೆ. ಸದ್ಯ ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.