ಬೆಂಗಳೂರು: ಹತ್ಯೆಯಾಗಿರುವ ಹಿಂದೂ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಶಾಸಕ ಅರವಿಂದ ಲಿಂಬಾವಳಿ ಒಂದು ಲಕ್ಷ ರೂ ನೆರವು ಘೋಷಿಸಿದ್ದಾರೆ.
ಟ್ವೀಟ್‍ನಲ್ಲಿ ಏನಿದೆ?: ಹಿಂದೂ ಕಾರ್ಯಕರ್ತ ಹರ್ಷ ಅವರನ್ನು ಹತ್ಯೆ ಮಾಡಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಮತ್ತು ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸುವಂತೆ ಸರ್ಕಾರವನ್ನು ಆಗ್ರಹಿಸುತ್ತೇನೆ. ಹರ್ಷರವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.ನಿನ್ನೆ ನಡೆದ ಆಘಾತಕಾರಿ ಘಟನೆಯಲ್ಲಿ ತಮ್ಮ ಮಗನನ್ನು ಕಳೆದುಕೊಂಡ ಹರ್ಷ ಕುಟುಂಬಸ್ಥರಿಗೆ ನಾನು ವೈಯಕ್ತಿಕವಾಗಿ ಒಂದು ಲಕ್ಷ ರೂಪಾಯಿ ಪರಿಹಾರ ನೀಡುತ್ತೇನೆ ಮತ್ತು ಎಲ್ಲಾ ನೋವು ಮತ್ತು ದುಃಖಗಳಲ್ಲಿ ಅವರ ಕುಟುಂಬದ ಜೊತೆಗಿರುತ್ತೇನೆ ಎಂದು ಟ್ವೀಟ್ ಮಾಡಿ ಸಹಾಯ ಹಸ್ತವನ್ನು ಚಾಚುವುದಾಗಿ ತಿಳಿಸಿದ್ದಾರೆ.