Breaking News

ಸಿಎಂ ಭೇಟಿಯಾದ ಮುತಾಲಿಕ್​: ಹರ್ಷ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡುವಂತೆ ಒತ್ತಾಯ

Spread the love

ಬೆಂಗಳೂರು: ಭಜರಂಗದಳ ಸಂಘಟನೆ ಕಾರ್ಯಕರ್ತ ಹರ್ಷ ಕೊಲೆ ಖಂಡಿಸಿರುವ ಶ್ರೀರಾಮ ಸೇನೆಯ ನಿಯೋಗವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ನಾಲ್ಕು ಅಂಶಗಳ ಬಗ್ಗೆ‌ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಪತ್ರ ನೀಡಿದೆ.

ಶ್ರೀರಾಮ ಸೇನೆಯ ನಿಯೋಗದ ಮನವಿ ಪತ್ರ

ಈ ಬಗ್ಗೆ ಮಾತನಾಡಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷನನ್ನ ಕೊಲೆ ಮಾಡಿರುವುದು ಹೇಯ ಕೃತ್ಯವಾಗಿದೆ‌‌.

ಇನ್ನೊಂದು ತಿಂಗಳೊಳಗೆ ಎಲ್ಲಾ ಆರೋಪಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಎಸ್​ಡಿಪಿಐ, ಪಿಎಫ್ಐ ಹಾಗೂ ಸಿಎಫ್​​ಐ ಸಂಘಟನೆಗಳಿಂದ ಎರಡು ವರ್ಷಗಳಿಂದ ಮೃತ ಹರ್ಷನಿಗೆ ಜೀವ ಬೆದರಿಕೆ ಇದ್ದರೂ ಸಹ ಸರ್ಕಾರ ರಕ್ಷಣೆ ನೀಡದಿರುವುದು ನಾಚಿಗೇಡಿನ ಸಂಗತಿಯಾಗಿದೆ‌ ಎಂದು ವಾಗ್ದಾಳಿ ನಡೆಸಿದರು.

ಈ ಹಿಂದೆ ಪ್ರತಿಪಕ್ಷದಲ್ಲಿದ್ದಾಗ ಬಿಜೆಪಿಯು ರಾಜ್ಯದಲ್ಲಿ ಎಸ್​ಡಿಪಿಐ ಹಾಗೂ ಪಿಎಫ್ಐ ಸಂಘಟನೆ ನಿಷೇಧಿಸುವಂತೆ ಒತ್ತಾಯಿಸಿತ್ತು.‌ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಇಂತಹ ಸಂಘಟನೆಗಳನ್ನ ನಿಷೇಧಿಸಬೇಕು. ಮೃತ ಹರ್ಷನ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಬೇಕು ಹಾಗೂ ಹಿಂದೂ‌ ಕಾರ್ಯಕರ್ತರಿಗೆ ಹಾಗೂ ಮುಖಂಡರಿಗೆ ಭದ್ರತೆ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

SIT ಮುಂದೆ ಕೊನೆಗೂ ಬುರುಡೆ ರಹಸ್ಯ ಬಿಚ್ಚಿಟ್ಟ ಗಿರೀಶ್ ಮಟ್ಟಣ್ಣವರ್

Spread the loveಮಂಗಳೂರು, ಸೆಪ್ಟೆಂಬರ್​ 07: ಧರ್ಮಸ್ಥಳ ಬುರುಡೆ ಪ್ರಕರಣದ (Dharmasthala Case) ಒಂದೊಂದೆ ಸತ್ಯಗಳು ಹೊರ ಬರುತ್ತಿವೆ.  ಇಷ್ಟು ದಿನ ಬುರುಡೆ ಕಥೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ