ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಸಿನಿಮಾ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ಒಂದು. ವಿಕ್ರಾಂತ್ ರೋಣ ಸಿನಿಮಾ ಫೆ.24ರಂದು ಬಿಡುಗಡೆಯಾಗಬೇಕಿತ್ತು. ಆದರೆ ಕೊರೊನಾ ಕಾರಣದಿಂದ ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿತ್ತು.
3D ಆವೃತ್ತಿಯಲ್ಲಿ ಬಿಡುಗಡೆಯಾಗುತ್ತಿರುವ ಸಿನಿಮಾ ಬಗ್ಗೆ ಸುದೀಪ್ ಬಹಳ ಸಂತಸ ವ್ಯಕ್ತಪಡಿಸಿದ್ದಾರೆ.
3D ವರ್ಷನ್ ತುಂಬಾ ಚೆನ್ನಾಗಿ ಮೂಡಿ ಬಂದಿದೆ, ಚಿತ್ರತಂಡಕ್ಕೆ ಅಭಿನಂದನೆಗಳು ಎಂದು ಸುದೀಪ್ ಟೀಟ್ ಮಾಡಿದ್ದಾರೆ.
ಇದೇ ಸುದೀಪ್ ತಾವು ವಿಕ್ರಾಂತ್ ರೋಣ ನಿರ್ದೇಶಕ ಅನುಪ್ ಭಂಡಾರಿ ಜೊತೆ ಮತ್ತೊಂದು ಹೊಸ ಸಿನಿಮಾ ಮಾಡುವುದಾಗಿ ಘೋಷಿಸಿದ್ದಾರೆ.