ಬೆಂಗಳೂರು : ಶಿವಮೊಗ್ಗದಲ್ಲಿ ಭಾನುವಾರ ರಾತ್ರಿ ನಡೆದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಗೆ ‘ಮುಸ್ಲಿಂ ಗೂಂಡಾಗಳೇ ಕಾರಣಕರ್ತರು’ ಎಂಬ ಹೇಳಿಕೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಮರ್ಥಿಸಿಕೊಳ್ಳಲು ನಿರಾಕರಿಸಿದ್ದು,’ಅವರು ಹೇಳಿದ ಮಾತ್ರಕ್ಕೆ ನಾನು ಹೇಳಬೇಕು ಅಂತಿಲ್ಲ, ತನಿಖೆ ನಡೆದ ಬಳಿಕ ಎಲ್ಲವೂ ಹೊರಗೆ ಬರಲಿದೆ’ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ‘ರಾತ್ರಿ ಹರ್ಷ ಅನ್ನೋ ಹುಡುಗ ಹತ್ಯೆಯಾಗಿದ್ದು, ಅವನ ಹೆಸರೇ ಹಿಂದೂ ಹರ್ಷ ಅಂತ. ಈಗಾಗಲೇ ತನಿಖೆ ನಡೆಯುತ್ತಿದೆ.ಯಾರೆಲ್ಲಾ ಭಾಗಿಯಾಗಿದ್ದಾರೆ ಅನ್ನೋ ಪ್ರಾಥಮಿಕ ಮಾಹಿತಿ ಕಲೆ ಹಾಕಲಾಗುತ್ತಿದೆ.ಈ ನಡುವೆ ಯಾವುದೇ ಅಹಿತ ಕರ ಘಟನೆ ನಡೆಯದಂತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಶೀಘ್ರವೇ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ’ ಎಂದರು.