Breaking News

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಕೇಸ್ : ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ,

Spread the love

ಶಿವಮೊಗ್ಗ: ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶಿವಮೊಗ್ಗದಲ್ಲಿ ಫೆಬ್ರವರಿ 23 ರ ಮುಂಜಾನೆಯವರೆಗೆ ಕರ್ಫ್ಯೂ ಜಾರಿ ಮಾಡಲಾಗಿದೆ. ಶಿವಮೊಗ್ಗ ಎಸ್​ಪಿ ಬಿ.ಎಂ. ಲಕ್ಷ್ಮೀಪ್ರಸಾದ್ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ನಗರದ ಸೀಗೆಹಟ್ಟಿ ನಿವಾಸಿ ಹರ್ಷ (24) ನ ಮೇಲೆ ಮಾರಕಾಸ್ತ್ರಗಳಿಂದ ಹತ್ಯೆಗೈದು ನಾಲ್ವರು ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದರು. . ಹಲ್ಲೆ ನಡೆಯುತ್ತಿದ್ದಂತೆ ಎರಡು ಗುಂಪುಗಳ ನಡುವೆ ನಗರದಲ್ಲಿ ಕಲ್ಲು ತೂರಾಟ ನಡೆದಿದೆ. ಈ ವೇಳೆ ನಗರದ ದೊಡ್ಡಪೇಟೆ ಪೊಲೀಸ್‌ ಠಾಣಾ ಪೊಲೀಸರು ಲಾಠಿ ಚಾರ್ಜ್‌ ‌ಮಾಡಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಈ ಹಿನ್ನೆಲೆ ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶಿವಮೊಗ್ಗದಲ್ಲಿ ಫೆಬ್ರವರಿ 23 ರ ಮುಂಜಾನೆಯವರೆಗೆ ಕರ್ಫ್ಯೂ ಜಾರಿ ಮಾಡಲಾಗಿದೆ ಮುನ್ನೆಚ್ಚರಿಕಾ ಕ್ರಮವಾಗಿ ನಗರದ ಶಾಲಾ ಕಾಲೇಜುಗಳಿಗೆ ಇಂದು ಡಿಸಿ ಡಾ. ಸೆಲ್ವಮಣಿ ರಜೆ ಘೋಷಿಸಿದ್ದಾರೆ.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ