ಬೆಂಗಳೂರು: ಐಪಿಎಸ್ ಅಧಿಕಾರಿ ರವಿ ಚೆನ್ನಣ್ಣನವರ್ ವಿರುದ್ಧ ಫೇಸ್ ಬುಕ್ನಲ್ಲಿ ಅಕ್ರಮ ಆಸ್ತಿ ಗಳಿಕೆ ಆರೋಪ ಮಾಡಿದ್ದ, ವಕೀಲ ಜಗದೀಶ್ ವಿರುದ್ಧ ಸುಳ್ಳು ಜಾತಿ ನಿಂದನೆ ಕೇಸ್ ದಾಖಲಿಸಿರುವುದನ್ನು ಖಂಡಿಸಿ ವಕೀಲರು ಹೋರಾಟ ನಡೆಸಲು ಮುಂದಾಗಿದ್ದಾರೆ.
ಈ ಕುರಿತಂತೆ ಪೂರ್ವಭಾವಿ ಸಭೆ ನಡೆಸಲು ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ ರಂಗನಾಥ್ ಮುಂದಾಗಿದ್ದಾರೆ. ನಾಳೆ ಸಂಜೆ ಸಭೆ ನಡೆಸಲು ತೀರ್ಮಾನಿಸಿದ್ದು, ಸಮಾನ ಮನಸ್ಕ ವಕೀಲರು ಹಾಗೂ ವಕೀಲರ ಸಂಘಟನೆಗಳು ಸಭೆ ಆಗಮಿಸುವಂತೆ ಕರೆ ನೀಡಿದ್ದಾರೆ.
ಬೆಂಗಳೂರಿನ ಕೆ.ಆರ್ ವೃತ್ತದಲ್ಲಿರುವ ಯುುವಿಸಿಇ ಹಳೆಯ ವಿದ್ಯಾರ್ಥಿಗಳ ಸಂಘದ ಸಭಾಭವನದಲ್ಲಿ ಸಭೆ ನಡೆಯಲಿದೆ. ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಿದ್ದ ವಕೀಲ ಜಗದೀಶ್ ವಿರುದ್ಧ ಸುಳ್ಳು ಜಾತಿ ನಿಂದನೆ ಕೇಸ್ ದಾಖಲಿಸಿರುವ ಪೊಲೀಸ್ ಇಲಾಖೆಯ ಅಧಿಕಾರ ದುರುಪಯೋಗ ಕ್ರಮ ಖಂಡಿಸಿ ಹೋರಾಟ ನಡೆಸಲು ಪೂರ್ವಭಾವಿಯಾಗಿ ಈ ಸಭೆ ಆಯೋಜಿಸಲಾಗಿದೆ. ಸಭೆ ಸಂಜೆ 4.30ಕ್ಕೆ ನಡೆಯಲಿದೆ.